ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್ ರಾಜ್‌ಕುಮಾರ್ ಆರೋಗ್ಯ ಸ್ಥಿತಿ ಗಂಭೀರ: ವಿಕ್ರಮ್ ಆಸ್ಪತ್ರೆ ಎದುರು ಜನಸ್ತೋಮ

Last Updated 29 ಅಕ್ಟೋಬರ್ 2021, 8:27 IST
ಅಕ್ಷರ ಗಾತ್ರ

ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡುತ್ತಿರುವ ವಿಕ್ರಮ್ ಆಸ್ಪತ್ರೆ ಎದುರು ಜನಸ್ತೋಮ ಸೇರಿದೆ.

ಶುಕ್ರವಾರ ಬೆಳಿಗ್ಗೆ ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್‍ಕುಮಾರ್ ಕುಸಿದು ಬಿದ್ದಿದ್ದರು. ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ವಿಕ್ರಮ್ ಆಸ್ಪತ್ರೆಗೆ ಕರೆತರಲಾಗಿದೆ.

ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಬಗ್ಗೆ ಒಂದು ಗಂಟೆ ಬಳಿಕ ನಿಖರ ಮಾಹಿತಿ ನೀಡಲಾಗುವುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಅವರ ಅಭಿಮಾನಿಗಳು, ಆಸ್ಪತ್ರೆ ಎದುರು ಸೇರಿದ್ದಾರೆ. ಕನ್ನಿಂಗ್ ಹ್ಯಾಮ್ ರಸ್ತೆ ಹಾಗೂ ವಿಕ್ರಮ್ ಆಸ್ಪತ್ರೆ ರಸ್ತೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ.

ಬೇರೆ ಆಸ್ಪತ್ರೆಯ ವೈದ್ಯರು, ವಿಕ್ರಮ್ ಆಸ್ಪತ್ರೆಗೆ ಬರುತ್ತಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT