ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಧದ ಗುಡಿ: ಮತ್ತೆ ತೆರೆಯ ಮೇಲೆ ಅಪ್ಪು

Last Updated 5 ಡಿಸೆಂಬರ್ 2021, 10:34 IST
ಅಕ್ಷರ ಗಾತ್ರ

ಬೆಂಗಳೂರು: ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರ ಕನಸಿನ ಪ್ರೊಜೆಕ್ಟ್‌ ‘ಗಂಧದ ಗುಡಿ’ ಡಾಕ್ಯೂಫಿಲಂನ ಶೀರ್ಷಿಕೆಯ ಟೀಸರ್‌ ಡಿ.6ಕ್ಕೆ ಬೆಳಗ್ಗೆ 10 ಗಂಟೆಗೆ ಪಿಆರ್‌ಕೆ ಯೂಟ್ಯೂಬ್‌ ಚಾನಲ್‌ನಲ್ಲಿ ಅನಾವರಣಗೊಳ್ಳಲಿದೆ.

‘ಹಿಂದೆಂದೂ ಕಾಣದ ಸಿನಿಮಾ ಅನುಭವ! ನಿಮ್ಮ ಮುಂದೆ ನಾಳೆ 10ಕ್ಕೆ’ ಎಂದು ಪುನೀತ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಟ್ವೀಟ್‌ ಮಾಡಿದ್ದಾರೆ. ಪಿಆರ್‌ಕೆ ಪ್ರೊಡಕ್ಷನ್ಸ್‌ನಡಿ,ರಾಷ್ಟ್ರಪ್ರಶಸ್ತಿ ವಿಜೇತ ‘ವೈಲ್ಡ್‌ ಕರ್ನಾಟಕ’ ಖ್ಯಾತಿಯ ಅಮೋಘವರ್ಷ ಜೆ.ಎಸ್‌. ಅವರ ಜೊತೆಗೂಡಿ ಪುನೀತ್‌ ‘ಗಂಧದ ಗುಡಿ’ ಹೆಸರಿನಲ್ಲಿ ಡಾಕ್ಯೂಫಿಲಂ ಒಂದನ್ನು ನಿರ್ಮಾಣ ಮಾಡಿದ್ದರು.

ಕರ್ನಾಟಕದ ವನ್ಯಲೋಕ, ವನ್ಯಸಂಪತ್ತನ್ನು ಪರಿಚಯಿಸುವ ಈ ಸಾಕ್ಷ್ಯಚಿತ್ರದ ಟೀಸರ್‌ ನ.1ಕ್ಕೆ ಅನಾವರಣಗೊಳ್ಳಬೇಕಿತ್ತು. ಆದರೆ ಅಪ್ಪು ಅಕಾಲಿಕ ನಿಧನದಿಂದಾಗಿ ಇದು ಸಾಧ್ಯವಾಗಿರಲಿಲ್ಲ. ನಾಗರಹೊಳೆ, ಕಾಳಿನದಿ, ಹೊಸಪೇಟೆ ಸೇರಿದಂತೆ ಕರ್ನಾಟಕದ ಹಲವು ಜಾಗಗಳಲ್ಲಿ ಸುತ್ತಿ ಇದರ ಚಿತ್ರೀಕರಣ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT