ಬುಧವಾರ, ಮಾರ್ಚ್ 29, 2023
32 °C

ರಾಜಣ್ಣನ ಕಾಲದಲ್ಲಿದ್ದ ಒಗ್ಗಟ್ಟು ಮತ್ತೆ ಬರೋದಿಲ್ಲವೆಂಬ ಕೊರಗು ಇತ್ತು: ಜಗ್ಗೇಶ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅಕಾಲಿಕ ನಿಧನ ಕನ್ನಡ ಚಿತ್ರರಂಗವನ್ನು ಚಿಂತೆಗೀಡುಮಾಡಿದೆ. ‘ಅಪ್ಪು’ ಚಿತ್ರರಂಗದ ನಟ – ನಟಿಯರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಹಾಗಾಗಿ ಅವರ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ.

ಇದರ ನಡುವೆ ಚಿತ್ರರಂಗದ ನಟರು ಸ್ಟಾರ್‌ ವಾರ್‌, ಫ್ಯಾನ್‌ ವಾರ್‌ ಎಂಬ ವೈಮನಸ್ಸನ್ನು ಪಕ್ಕಕ್ಕಿಟ್ಟು ಒಟ್ಟಾಗಿ ಇರೋಣ ಎಂಬಂತಹ ಸಂದೇಶ ಸಾರುತ್ತಿದ್ದಾರೆ.

ಕನ್ನಡ ಚಿತ್ರರಂಗದ ನಟರೆಲ್ಲರೂ ಒಟ್ಟಿಗೆ ಇರುವ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ‘ಯುನೈಟೆಡ್‌ ಕೆಎಫ್‌ಐ ಕನ್ನಡ ಚಿತ್ರರಂಗ, ಯುನೈಟೆಡ್‌ ಕೆಎಫ್‌ಐ ಫ್ಯಾನ್ಸ್‌’ ಎಂಬ ಸಾಲುಗಳು ಆ ಫೋಟೊದಲ್ಲಿದ್ದು, ನಾವೆಲ್ಲರೂ ಒಗ್ಗಟ್ಟಾಗಿರೋಣ ಎಂಬ ಸಂದೇಶವನ್ನು ಬರೆಯಲಾಗಿದೆ.

ಸದ್ಯ ಈ ಫೋಟೊವನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ನಟ ಜಗ್ಗೇಶ್‌, ‘ಈ ಭಾವ ನನ್ನ ಕಣ್ಣಲ್ಲಿ ಆನಂದಭಾಷ್ಪ ತರಿಸಿತು. ಮಾನ್ಯರೆ ನಾವೆಲ್ಲಾ ಶಾರದೆಯ ಮಕ್ಕಳು. ಚಿತ್ರರಂಗ ನಮ್ಮ ಮನೆ. ಕನ್ನಡಿಗರು ನಮ್ಮ ಬಂಧುಗಳು. ನಮ್ಮ ಈ ಒಗ್ಗಟ್ಟು ರಾಜಣ್ಣನ ಕಾಲದಲ್ಲಿ ಇತ್ತು. ಮತ್ತೆ ಬರೋದಿಲ್ಲವೆ ಎಂಬ ಕೊರಗು ಕಾಡುತ್ತಿತ್ತು. ಈಗ ಇದನ್ನ ನೋಡಿ ಹಾಲುಜೇನು ಸವಿದಂತೆ ಆಯಿತು. ಈ ಒಗ್ಗಟ್ಟಿನ ಮಂತ್ರ ಯಾವ ಅಡೆತಡೆ ಇಲ್ಲದೆ ಮುಂದುವರಿಯಲಿ. ಲವ್‌ ಆಲ್‌…’ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಚಿರಂಜೀವಿ ಸರ್ಜಾ, ಸಂಚಾರಿ ವಿಜಯ್‌, ಪುನೀತ್‌ ರಾಜ್‌ಕುಮಾರ್ ಅಕಾಲಿಕ ನಿಧನದಿಂದ ಚಿತ್ರರಂಗವನ್ನು ಶೋಕ ಸಾಗರಲ್ಲಿ ಮುಳುಗಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು