ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್ ರಾಜ್‌ಕುಮಾರ್ ಅವರ ಬಿಡದಿ ಬಳಿಯ ಫಾರ್ಮ್ ಹೌಸ್‌ನಲ್ಲಿ ಪರಿಶೀಲನೆ

Last Updated 29 ಅಕ್ಟೋಬರ್ 2021, 10:07 IST
ಅಕ್ಷರ ಗಾತ್ರ

ರಾಮನಗರ: ಬಿಡದಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತೆ ಪುನೀತ್ ರಾಜಕುಮಾರ್ ಅವರಿಗೆ ಸೇರಿದ ಫಾರ್ಮ್ ಹೌಸ್ ಇದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.

ದಶಕಗಳ ಹಿಂದೆಯೇ ರಾಜಕುಮಾರ್ ಕುಟುಂಬ ಇದನ್ನು ಖರೀದಿ ಮಾಡಿತ್ತು. ಪುನೀತ್ ಸಹ ಆಗಾಗ್ಗೆ ಇಲ್ಲಿಗೆ ಭೇಟಿ ನೀಡುತ್ತಿದ್ದರು. ಆದರೆ ಈಚಿನ ದಿನಗಳಲ್ಲಿ ತೋಟವನ್ನು ಸರಿಯಾಗಿ ನಿರ್ವಹಣೆ ಮಾಡದೇ ಹಾಗೆಯೇ ಬಿಡಲಾಗಿದೆ.

ಒಂದು ವೇಳೆ ಇಲ್ಲಿ ಅಂತ್ಯಕ್ರಿಯೆ ನಡೆಸಲು ಕುರಿತು ಕುಟುಂಬ ನಿರ್ಧರಿಸಿದಲ್ಲಿ ಅಗತ್ಯ ಸಿದ್ಧತೆ ಮತ್ತು‌ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ರಾಮನಗರ ಎಸ್ಪಿ ಗಿರೀಶ್ ಪರಿಶೀಲನೆ ನಡೆಸಿದರು. ಅಂತ್ಯಕ್ರಿಯೆ ಕುರಿತು ಈವರೆಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಗಿರೀಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT