ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್‌ ಸ್ಮಾರಕ ನಿರ್ಮಾಣ: ಬೊಮ್ಮಾಯಿ ಭರವಸೆ

ರೇಸ್‌ಕೋರ್ಸ್‌ ರಸ್ತೆಗೆ ಅಂಬರೀಶ್‌ ಹೆಸರು
Last Updated 8 ಫೆಬ್ರುವರಿ 2023, 21:21 IST
ಅಕ್ಷರ ಗಾತ್ರ

ಬೆಂಗಳೂರು: ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿಯನ್ನು ಸ್ಮಾರಕ ಮಾಡಲಾಗುವುದು. ಅಂಬರೀಶ್‌ ಸ್ಮಾರಕ ಕಾರ್ಯ ಪೂರ್ಣಗೊಂಡಿದ್ದು, ಮಾರ್ಚ್‌ನಲ್ಲಿ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ರಿಂಗ್ ರಸ್ತೆಗೆ ಡಾ. ಪುನೀತ್ ರಾಜಕುಮಾರ ರಸ್ತೆ ಎಂದು ನಾಮಕರಣ ಮಾಡಿ ಬಳಿಕ ಅವರು ಮಾತನಾಡಿದರು.

‘ಅಂಬರೀಶ್‌ ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ಅವರ ಹೆಸರನ್ನು ರೇಸ್‌ಕೋರ್ಸ್‌ ರಸ್ತೆಗೆ ಇಡಲು ತೀರ್ಮಾನಿಸಿದ್ದೇನೆ. ಅವರ ಜತೆ ವಾರದಲ್ಲಿ ಏಳೂ ದಿನ ಜೊತೆಗಿರುತ್ತಿದೆ. ಅವರ ಸ್ಮಾರಕ ಮಾಡುವ ಸೌಭಾಗ್ಯ ನನ್ನದು. ರಾಜ್‌ಕುಮಾರ್, ಅಂಬರೀಶ್‌, ವಿಷ್ಣುವರ್ಧನ್, ಶಂಕರ್‌ನಾಗ್‌, ಅಪ್ಪು ಇವರೆಲ್ಲ ನಮ್ಮನ್ನು ರಂಜಿಸಲು ಬಂದಿದ್ದರು ಎನಿಸುತ್ತದೆ. ನಮ್ಮೆಲ್ಲರಿಗೂ ಪ್ರೀತಿ ಬಿಟ್ಟು ಹೋಗಿದ್ದಾರೆ’ ಎಂದರು.

‘ಕಂದಾಯ ಸಚಿವ ಆರ್‌.ಅಶೋಕ ಅವರು ಏನು ಅಂದುಕೊಳ್ಳುತ್ತಾರೋ ಅದನ್ನು ಮಾಡುತ್ತಾರೆ. ಪ್ರತಿಯೊಂದು ವಾರ್ಡ್‌ ಅಭಿವೃದ್ಧಿ ಮಾಡಿದ್ದಾರೆ. ಉದ್ಯಾನವನ, ಶಾಲೆ, ಆಸ್ಪತ್ರೆಗಳನ್ನು ಮಾಡಿದ್ದಾರೆ. ಎರಡು ಉದ್ಯಾನಗಳು ಕಸದ ತೊಟ್ಟಿಯಾಗಿದ್ದವು. ಅವುಗಳನ್ನೂ ಅಭಿವೃದ್ಧಿಪಡಿಸಿದ್ದಾರೆ. ರಿಂಗ್‌ ರಸ್ತೆಗೆ ಅಪ್ಪು ಹೆಸರು ಇಟ್ಟು, ಅವರ ಹೆಸರನ್ನು ಚಿರಸ್ಥಾಯಿಯಾಗಿಸಿದ್ದಾರೆ’ ಎಂದರು.

ಕಾರ್ಯಕ್ರಮದಲ್ಲಿ ಸಚಿವ ಆರ್‌.ಅಶೋಕ, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್‌ ರೆಡ್ಡಿ, ರವಿ
ಸುಬ್ರಹ್ಮಣ್ಯ, ಉದಯ ಗರುಡಾಚಾರ್‌, ಎಂ.ಕೃಷ್ಣಪ್ಪ, ನಟ ರಾಘವೇಂದ್ರ ರಾಜ್‌ಕುಮಾರ್‌, ಅಭಿಷೇಕ್ ಅಂಬರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT