ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Yuvarathnaa Trailer| ಪುನೀತ್‌ ಅಭಿನಯದ ಯುವರತ್ನ ಟ್ರೇಲರ್‌ ಬಿಡುಗಡೆ

Last Updated 20 ಮಾರ್ಚ್ 2021, 9:39 IST
ಅಕ್ಷರ ಗಾತ್ರ

ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಭಿನಯದ 'ಯುವರತ್ನ' ಸಿನಿಮಾದ ಟ್ರೇಲರ್‌ ಶನಿವಾರ ಮಧ್ಯಾಹ್ನ ಬಿಡುಗಡೆಯಾಗಿದೆ.

ಬಿಡುಗಡೆಯಾದ ಕೇವಲ 40 ನಿಮಿಷಗಳ ಒಳಗಾಗಿ ಟ್ರೇಲರ್‌ ಅನ್ನು ಎರಡು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. 'ಹೊಂಬಾಳೆ ಫಿಲಮ್ಸ್‌' ಯುವರತ್ನ ಸಿನಿಮಾವನ್ನು ನಿರ್ಮಾಣ ಮಾಡಿದೆ. ಸಂತೋಷ್‌ ಆನಂದ್‌ರಾಮ್‌ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಶೈಕ್ಷಣಿಕ ರಂಗ ವ್ಯಾಪಾರೀಕರಣಗೊಂಡಿದೆ. ಇದು ಮಕ್ಕಳ ವಿದ್ಯಾಭ್ಯಾಸದ ಮೇಲೆ ದುಷ್ಪರಿಣಾಮ ಬೀರಿದೆ. ಹಣ ಇದ್ದರಷ್ಟೇ ಶಿಕ್ಷಣ ಎನ್ನುವಂತಾಗಿದೆ. ‌ಈ ದಂಧೆಯ ಸುತ್ತವೇ ಈ ಸಿನಿಮಾದ ಕಥೆ ಹೆಣೆಯಲಾಗಿದೆ. ಧನಂಜಯ್‌ ಇದರಲ್ಲಿ ಆ್ಯಂಟನಿ ಜೋಸೆಫ್‌ ಪಾತ್ರದಲ್ಲಿ ನಟಿಸಿದ್ದಾರೆ. ತಮಿಳು ನಟಿ ಶಯೇಷಾ ಅವರು ಪುನೀತ್‌ ರಾಜ್‌ಕುಮಾರ್‌ಗೆ ಜೋಡಿಯಾಗಿದ್ದಾರೆ. ವಿಜಯ್‌ ಕಿರಗಂದೂರು ಬಂಡವಾಳ ಹೂಡಿದ್ದಾರೆ.

ಎಸ್. ತಮನ್‌ ಸಂಗೀತ ಸಂಯೋಜಿಸಿದ್ದಾರೆ. ವೆಂಕಟೇಶ್‌ ಅಂಗುರಾಜ್‌ ಅವರ ಛಾಯಾಗ್ರಹಣವಿದೆ. ಪ್ರಕಾಶ್ ರಾಜ್‌, ವಸಿಷ್ಠ ಸಿಂಹ, ದಿಗಂತ್‌, ಸೋನು ಗೌಡ ತಾರಾಗಣದಲ್ಲಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT