ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜೇಮ್ಸ್‌’ ಪೋಸ್ಟರ್‌: ಪುನೀತ್‌ ಅಭಿಮಾನಿಗಳಿಗೆ ಗಣರಾಜ್ಯೋತ್ಸವದ ಗಿಫ್ಟ್

Last Updated 26 ಜನವರಿ 2022, 6:09 IST
ಅಕ್ಷರ ಗಾತ್ರ

ಬೆಂಗಳೂರು: ಚೇತನ್‌ ಕುಮಾರ್‌ ನಿರ್ದೇಶನದ, ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ನಟನೆಯ ಕೊನೆಯ ಚಿತ್ರ ‘ಜೇಮ್ಸ್‌’ ಸಿನಿಮಾದ ವಿಶೇಷ ಪೋಸ್ಟರ್‌ ಬಿಡುಗಡೆಯಾಗಿದೆ.

ಗಣರಾಜ್ಯೋತ್ಸವ ದಿನವಾದ ಇಂದು (ಗುರುವಾರ) ಬೆಳಗ್ಗೆ 11 ಗಂಟೆಗೆವಿಶೇಷ ಪೋಸ್ಟರ್‌ ಬಿಡುಗಡೆಯಾಗಿದೆ. ‘#Bolobolojames’ ಎನ್ನುವ ಹ್ಯಾಷ್‌ಟ್ಯಾಗ್‌ನಡಿ ಸಾವಿರಾರು ಅಪ್ಪು ಅಭಿಮಾನಿಗಳು ಟ್ವೀಟ್‌ ಮಾಡಿ ಪೋಸ್ಟರ್‌ ಅನ್ನು ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಈ ಪೋಸ್ಟರ್‌ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್‌ ಆಗಿದೆ. ಪುನೀತ್‌ ಪತ್ನಿ ಅಶ್ವಿನಿ ಈ ಪೋಸ್ಟರ್‌ ಅನ್ನು ಹಂಚಿಕೊಂಡಿದ್ದಾರೆ.

ಗಣರಾಜ್ಯೋತ್ಸವ ದಿನವಾದ ಇಂದು ಅಪ್ಪು ಅವರ ಕೊನೆಯ ಚಿತ್ರದ ಬಗ್ಗೆ ಹೊಸ ಅಪ್‌ಡೇಟ್‌ ಸಿಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಆದರೆ ಅಪ್ಪು ಅವರೇ ಇಲ್ಲದೆ ಇದನ್ನು ಸಂಭ್ರಮಿಸಲು ಕಷ್ಟವಾಗುತ್ತಿದೆ ಎಂದು ಪುನೀತ್‌ ಅಭಿಮಾನಿಗಳು ಹೇಳುತ್ತಿದ್ದಾರೆ.

ಜೇಮ್ಸ್‌ ಚಿತ್ರದ ಬಿಡುಗಡೆಗಾಗಿ ಪ್ರೇಕ್ಷಕರು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಪುನೀತ್‌ ಅವರ ಜನ್ಮದಿನವಾದ ಮಾರ್ಚ್‌ 17ರಂದು ಸಿನಿಮಾ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆಯಾದರೂ, ಚಿತ್ರತಂಡ ಈ ಕುರಿತು ಅಧಿಕೃತವಾದ ಘೋಷಣೆ ಮಾಡಿಲ್ಲ.

ಶಿವರಾಜ್‌ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌ ಹಾಗೂ ಪುನೀತ್‌ ರಾಜ್‌ಕುಮಾರ್‌ ಅವರನ್ನು ಒಂದೇ ಸಿನಿಮಾದಲ್ಲಿ ನೋಡುವ ಅಭಿಮಾನಿಗಳ ಆಸೆ ‘ಜೇಮ್ಸ್‌’ ಮೂಲಕ ಈಡೇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT