ಪಿಆರ್‌ಕೆ ಮತ್ತು ಸತ್ಯ ಆ್ಯಂಡ್ ಮಯೂರ ಪಿಕ್ಚರ್ಸ್ ಲಾಂಛನದಲ್ಲಿ ಮೂಡಿಬರುತ್ತಿರುವ ಸತ್ಯಪ್ರಕಾಶ್ ನಿರ್ದೇಶನದ ‘ಮ್ಯಾನ್ ಆಫ್ ದಿ ಮ್ಯಾಚ್’ ಚಿತ್ರದ ಚಿತ್ರೀಕರಣ ಅಂತಿಮ ಹಂತಕ್ಕೆ ತಲುಪಿದ್ದು, ನಟ ಪುನೀತ್ ರಾಜ್‌ಕುಮಾರ್ ಚಿತ್ರೀಕರಣದ ಸ್ಥಳಕ್ಕೆ ತೆರಳಿ ಚಿತ್ರತಂಡದೊಂದಿಗೆ ಮಾತುಕತೆ ನಡೆಸಿದರು.

‘ರಾಮಾ ರಾಮಾ ರೇ’, ‘ಒಂದಲ್ಲ ಎರಡಲ್ಲ’ ಮುಂತಾದ ಚಿತ್ರಗಳ ಮೂಲಕ ಖ್ಯಾತಿ ಪಡೆದಿರುವ ಸತ್ಯಪ್ರಕಾಶ್ ಅವರು ಪುನೀತ್ ರಾಜ್‌ಕುಮಾರ್ ಅವರಿಗೆ ನಿರ್ದೇಶನ ಮಾಡಲಿದ್ದಾರೆ ಎನ್ನುವ ಸುದ್ದಿ 2020ರ ಆರಂಭದಲ್ಲಿ ಹರಿದಾಡಿತ್ತು. ಕೋವಿಡ್ ಮತ್ತು ಲಾಕ್‌ಡೌನ್ ನಿರ್ಬಂಧಗಳಿಂದಾಗಿ ಈ ಚಿತ್ರವು ತಡವಾಗಿತ್ತು. ಜೇಮ್ಸ್ ಚಿತ್ರವನ್ನು ಪುನೀತ್ ಒಪ್ಪಿಕೊಂಡಿದ್ದ ಕಾರಣ, ಸತ್ಯಪ್ರಕಾಶ್ ಅವರ ಹೊಸ ಪ್ರೊಜೆಕ್ಟ್ ಮುಂದೂಡಲ್ಪಟ್ಟಿತ್ತು.

ಈ ಚಿತ್ರದ ಚರ್ಚೆಯ ಸಂದರ್ಭದಲ್ಲೇ ‘ಮ್ಯಾನ್ ಆಫ್ ದಿ ಮ್ಯಾಚ್’ ಚಿತ್ರದ ಎಳೆಯನ್ನು ಸತ್ಯಪ್ರಕಾಶ್ ಪುನೀತ್ ಅವರ ಬಳಿ ಹೇಳಿದ್ದರು. ಹೊಸ ಕಲಾವಿದರಿಗಾಗಿಯೇ ತಯಾರಿಸಿದ್ದ ಆ ಕಥೆಯ ವಸ್ತು ಹಾಗೂ ಚಿತ್ರಕಥೆಯಲ್ಲಿದ್ದ ಹೊಸತನ, ಪುನೀತ್ ಅವರಿಗೂ ಸಹ ಮೆಚ್ಚುಗೆಯಾಗಿ ತಮ್ಮದೇ ಬ್ಯಾನರ್‌ನಡಿ ಈ ಚಿತ್ರದ ಚಿತ್ರೀಕರಣಕ್ಕೆ ಅವರು ಹಸಿರು ನಿಶಾನೆ ನೀಡಿದ್ದರು. ಚಿತ್ರದ ಚಿತ್ರೀಕರಣ ಏಪ್ರಿಲ್‌ನಲ್ಲಿ ಆರಂಭವಾಗಿತ್ತು, ನಂತರ ಲಾಕ್‌ಡೌನ್ ಆದ ಕಾರಣ, ಇದೀಗ ಮತ್ತೆ ಚಿತ್ರೀಕರಣ ಆರಂಭವಾಗಿದ್ದು, ಕೊನೆಯ ಹಂತದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.