ಮಂಗಳವಾರ, ಜುಲೈ 5, 2022
23 °C

ಪುನೀತ್ ಹುಟ್ಟುಹಬ್ಬದಂದು ದೇಶದಾದ್ಯಂತ 4000 ಚಿತ್ರಮಂದಿರಗಳಲ್ಲಿ ‘ಜೇಮ್ಸ್‘ ತೆರೆಗೆ

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚೇತನ್‌ ಕುಮಾರ್‌ ನಿರ್ದೇಶನದ, ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ನಟನೆಯ ಕೊನೆಯ ಚಿತ್ರ 'ಜೇಮ್ಸ್' ಬಿಡುಗಡೆಗೆ ಸಿದ್ಧವಾಗಿದ್ದು, ಈ ಪ್ಯಾನ್‌ ಇಂಡಿಯಾ ಸಿನಿಮಾ ಪುನೀತ್‌ ರಾಜ್‌ಕುಮಾರ್‌ ಜನ್ಮದಿನದಂದು (ಮಾ.17) ದೇಶದಾದ್ಯಂತ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಸೆನ್ಸಾರ್‌ ಮಂಡಳಿಯು ಯು/ಎ ಪ್ರಮಾಣಪತ್ರ ನೀಡಿದ್ದು, ಕನ್ನಡ ಸೇರಿದಂತೆ ತಮಿಳು, ಹಿಂದಿ, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಕರ್ನಾಟಕವೊಂದರಲ್ಲೇ 400ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಜೇಮ್ಸ್ ಪ್ರದರ್ಶನಗೊಳ್ಳಲಿದೆ.

ಮೋಷನ್ ಪಿಕ್ಚರ್, ಟೀಸರ್ ಮತ್ತು ಹಾಡುಗಳು ಈಗಾಗಲೇ ಯಶಸ್ಸು ಕಂಡಿದ್ದು, ಚಿತ್ರದ ಬಿಡುಗಡೆಗಾಗಿ ಅಪ್ಪು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಮಾಫಿಯಾ ಕಥೆಯನ್ನು ಚಿತ್ರವು ಹೊಂದಿದೆ. ಜೆ–ವಿಂಗ್‌ ಎಂಬ ಸೆಕ್ಯುರಿಟಿ ಏಜೆನ್ಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾತ್ರದಲ್ಲಿ ಪವರ್‌ಸ್ಟಾರ್‌ ಪುನೀತ್‌ ಅವರು ಪವರ್‌ಫುಲ್‌ ಆಗಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ಡಬ್ಬಿಂಗ್‌ ಪೂರ್ಣಗೊಳ್ಳುವ ಮೊದಲೇ ಪುನೀತ್‌ ಅವರು ನಿಧನರಾದ ಕಾರಣ, ಪುನೀತ್‌ ಅವರ ಪಾತ್ರಕ್ಕೆ ನಟ ಶಿವರಾಜ್‌ಕುಮಾರ್‌ ಅವರು ಧ್ವನಿ ನೀಡಿದ್ದಾರೆ.

ಪುನೀತ್‌ಗೆ ನಾಯಕಿಯಾಗಿ ಪ್ರಿಯಾ ಆನಂದ್ ನಟಿಸಿದ್ದಾರೆ. ಇನ್ನುಳಿದಂತೆ ಚಿತ್ರದಲ್ಲಿ ಶರತ್ ಕುಮಾರ್, ಶ್ರೀಕಾಂತ್ ಆದಿತ್ಯ ಮೆನನ್, ಕಾಮಿಡಿಯನ್ ಸಾಧು ಕೋಕಿಲ, ಅನು ಪ್ರಭಾಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು