ಗುರುವಾರ , ಮೇ 26, 2022
26 °C

ಕಾಂಗ್ರೆಸ್‌ ಸೇರಿದ ತಂಗಿ ಪರ ಪ್ರಚಾರ: ಮಾತು ತಪ್ಪಿದ ಸೋನು ಸೂದ್‌ ಎಂದ ನೆಟ್ಟಿಗರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂಡೀಗಡ: ನಟ ಸೋನು ಸೂದ್ ಅವರ ತಂಗಿ ಮಾಳವಿಕಾ ಸೂದ್ ಪಂಜಾಬ್‌ನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿ ಚುನಾವಣೆಗೆ ಸ್ಪರ್ಧೆ ಮಾಡಿದ್ದು ಅವರ ಪರವಾಗಿ ನಟ ಹಾಗೂ ಅಣ್ಣ ಸೋನು ಸೂದ್‌ ಪ್ರಚಾರ ಮಾಡಿದ್ದಾರೆ.

ಇಲ್ಲಿನ ಮೋಗದಲ್ಲಿ ತಂಗಿ ಪರವಾಗಿ ಅವರು ಪ್ರಚಾರ ಮಾಡಿದರು. ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ ಪಕ್ಷ ಸೇರಿರುವ ತಂಗಿ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂಬ ಹೇಳಿಕೆ ನೀಡಿದ್ದರು. ಈ ಸಂದರ್ಭದಲ್ಲಿ ನೆಟ್ಟಿಗರು ಸೋನು ಸೂದ್‌ ಪರವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಸೋನು ಸೂದ್‌ ತಂಗಿ ಪ್ರಚಾರ ಮಾಡುತ್ತಿರುವ ಚಿತ್ರಗಳು ಹಾಗೂ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ನೆಟ್ಟಿಗರು ಮಾತು ತಪ್ಪಿದ ಸೋನು ಎಂದು ಹೇಳುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಸೋನು ಮಾತು ತಪ್ಪಿದ್ದಾರೆ ಎಂದು ಕೆಲ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕೆಲಸಗಳಲ್ಲಿ ಗುರುತಿಸಿಕೊಂಡಿರುವ ಸೋನು ಸೂದ್‌ ನಾನು ರಾಜಕೀಯ ಕ್ಷೇತ್ರದಿಂದ ದೂರ ಇರುತ್ತೇನೆ ಎಂದು ಹೇಳಿದ್ದರು. ಇನ್ನು ಪಂಜಾಬ್‌ನಲ್ಲಿ ವಿದ್ಯಾರ್ಥಿನಿಯರಿಗೆ ಸೈಕಲ್‌ ವಿತರಣೆ ಮಾಡಿರುವುದು ಕೂಡ ರಾಜಕೀಯ ಗಿಮಿಕ್‌ ಎಂದು ಹಲವರು ಟೀಕಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು