ಸೋಮವಾರ, ಫೆಬ್ರವರಿ 17, 2020
16 °C

ಹಿಂಸೆಯ ವೈಭವೀಕರಣ: ಪಂಜಾಬ್‌ನಲ್ಲಿ ಶೂಟರ್‌ ಸಿನಿಮಾಗೆ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಮೃತಸರ: ಕುಖ್ಯಾತ ಗ್ಯಾಂಗ್‌ಸ್ಟಾರ್ ಸುಖಾ ಕಾಲ್ವಾನ್‌ ಜೀವನ ಆಧಾರಿತ ಪಂಜಾಬಿ ಸಿನಿಮಾ ‘ಶೂಟರ್‌‘ ನಿಷೇಧಿಸಿ ಪಂಜಾಬ್  ಸರ್ಕಾರ ಆದೇಶ ಹೊರಡಿಸಿದೆ.

ಅತಿಯಾದ ಹಿಂಸೆ, ಘೋರ ಅಪರಾಧಗಳು, ಸುಲಿಗೆ, ಕ್ರಿಮಿನಲ್ ಬೆದರಿಕೆಗಳನ್ನು ಸಿನಿಮಾದಲ್ಲಿ ತೋರಿಸಲಾಗಿದ್ದು ಇದು ಸಮಾಜದಲ್ಲಿ ಹಿಂಸೆಯನ್ನು ಉತ್ತೇಜಿಸುತ್ತಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದ್ರ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಚಿತ್ರದ ಪ್ರದರ್ಶನಕ್ಕೆ ತಡೆಯೊಡ್ಡಿದೆ.

ಸಿಂಗ್ ಅವರು ಪೊಲೀಸ್ ಆಯುಕ್ತರಿಗೆ ‘ಶೂಟರ್‘ ಚಿತ್ರ ತಂಡದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದು, ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಡಿಜಿಪಿ ದೀನಕರ್ ಗುಪ್ತ ಅವರು ಹೇಳಿದ್ದಾರೆ.

ಸಮಾಜದಲ್ಲಿ ಹಿಂಸೆಗೆ ಪ್ರೋತ್ಸಾಹ ನೀಡುವ ಯಾವುದೇ ಸಿನಿಮಾ, ಹಾಡು ಮತ್ತು ನಾಟಕಗಳಿಗೆ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟ ತೀರ್ಮಾನ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ವಕ್ತಾರರು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ನಡೆಸಿದ ಸಭೆಯಲ್ಲಿ ಈ ಚಿತ್ರವು ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವುವ ಸಾಧ್ಯತೆ ಇದೆ ಎಂದು ಪಂಜಾಬ್‌ನಲ್ಲಿ ಚಿತ್ರದ ಪ್ರದರ್ಶನಕ್ಕೆ ನಿಷೇಧ ಹೇರಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)