ಹೈದರಾಬಾದ್: ತೆಲುಗು ನಟ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ–2 ಚಿತ್ರ ಮೂರನೇ ದಿನಕ್ಕೆ ₹500 ಕೋಟಿ ಗಳಿಕೆ ಮಾಡಿದೆ. ಭಾರತೀಯ ಚಿತ್ರರಂಗದಲ್ಲಿ ಅತಿಹೆಚ್ಚು ಗಳಿಕೆ ಮಾಡಿರುವ ಚಿತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಸಿನಿಮಾ ನಿರ್ಮಾಪಕ ನವೀನ್ ಯೆರ್ನೇನಿ ಶನಿವಾರ ತಿಳಿಸಿದ್ದಾರೆ.

ಸಿನಿಮಾದ ಯಶಸ್ಸಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನವೀನ್, ‘ಪುಷ್ಪ–2 ಅತ್ಯುತ್ತಮ ಪ್ರದರ್ಶನ ಕಾಣುತ್ತಿದ್ದು, ಬುಕ್ಮೈಶೋದಲ್ಲಿ 1 ಲಕ್ಷ ಟಿಕೆಟ್ ಬುಕಿಂಗ್ ಆಗಿದೆ. ನಿಮ್ಮ ಬೆಂಬಲಕ್ಕಾಗಿ ಧನ್ಯವಾದಗಳು’ ಎಂದಿದ್ದಾರೆ.

ಡಿ.4ರಂದು ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ.

ತೆಲಂಗಾಣ ಮತ್ತು ಆಂಧ್ರಪ್ರದೇಶ ಸರ್ಕಾರಗಳು ವಿಶೇಷ ಟಿಕೆಟ್ ದರವನ್ನು ವಿಧಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಎರಡೂ ಸರ್ಕಾರಗಳಿಗೆ ಧನ್ಯವಾದ ತಿಳಿಸಿದ ಅಲ್ಲು ಅರ್ಜುನ್, ಚಿತ್ರದ ಯಶಸ್ಸಿನ ಶ್ರೇಯಸ್ಸು ನಿರ್ದೇಶಕ ಸುಕುಮಾರ್ ಅವರಿಗೆ ಸಲ್ಲಬೇಕು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.