ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'Pushpa 2' ಹಾಡು ಬಿಡುಗಡೆ: ‍ಪುಷ್ಪರಾಜ್‌ ಮೇಲೆ ಹೆಚ್ಚಾಗುತ್ತಿದೆ ಹೈಪ್‌...

Published 2 ಮೇ 2024, 3:29 IST
Last Updated 2 ಮೇ 2024, 3:29 IST
ಅಕ್ಷರ ಗಾತ್ರ

ಹೈದರಾಬಾದ್‌: ‘ಪುಷ್ಪ 2’ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ‘ಪುಷ್ಪ ಪುಷ್ಪ..’ ಎಂಬ ಈ ಹಾಡಿನಲ್ಲಿ ನಾಯಕ ಅಲ್ಲು ಅರ್ಜುನ್‌ ಗುಣಗಾನ ಮಾಡಲಾಗಿದೆ. ಈ ಹಾಡಿಗೆ ಅಲ್ಲು ಅರ್ಜುನ್​ ಅಭಿಮಾನಿಗಳಿಂದ ಬಹುಪರಾಕ್‌ ಸಿಕ್ಕಿದೆ.

ಈ ಹಾಡು ಬಿಡುಗಡೆಯಾಗಿ ಕೆಲವೇ ಗಂಟೆಗಲ್ಲಿ ಲಕ್ಷಾಂತರ ವೀಕ್ಷಣೆ ಕಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಾಡಿಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. 

ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್​ ರಾಗ ಸಂಯೋಜಿಸಿರುವ ಈ ಹಾಡನ್ನು ‘ಟಿ ಸಿರೀಸ್​’ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಪುಷ್ಪ–1 ಸಿನಿಮಾ ಸಾಕಷ್ಟು ಸದ್ದು ಮಾಡಿತ್ತು. ಇದರ ಮುಂದುವರೆದ ಭಾಗವಾಗಿ ‘ಪುಷ್ಪ 2’ ಸಿನಿಮಾ ತೆರೆಗೆ ಬರಲಿದೆ. ನಿರ್ದೇಶಕ ಸುಕುಮಾರ್​ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಹೊಸ ದಾಖಲೆಗಳನ್ನು ಬರೆಯುವ ಎಲ್ಲ ಲಕ್ಷಣಗಳು ಕಾಣುತ್ತಿವೆ. 

ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳಂ, ಬೆಂಗಾಲಿ ಭಾಷೆಗಳಲ್ಲಿ ‘ಪುಷ್ಪ 2’ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT