ಹೈದರಾಬಾದ್: ‘ಪುಷ್ಪ–2’ ಚಿತ್ರದ ಪ್ರದರ್ಶನದ ವೇಳೆ ಚಿತ್ರಮಂದಿರದಲ್ಲಿ ಉಂಟಾದ ಕಾಲ್ತುಳಿತದಿಂದ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣದ ಆರೋಪಿ, ತೆಲುಗು ನಟ ಅಲ್ಲು ಅರ್ಜುನ್ ಅವರ ಜಾಮೀನು ಅರ್ಜಿ ಕುರಿತ ಆದೇಶವನ್ನು ಇಲ್ಲಿನ ನ್ಯಾಯಾಲಯ ಸೋಮವಾರ ಕಾಯ್ದಿರಿಸಿದೆ.

ಎರಡನೇ ಹೆಚ್ಚುವರಿ ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶರು, ಜಾಮೀನು ಪ್ರಶ್ನಿಸಿ ಸಲ್ಲಿರುವ ಪೊಲೀಸರ ವಾದ ಮತ್ತು ನಟನ ಪರ ವಕೀಲರ ವಾದಗಳನ್ನು ಆಲಿಸಿದ ನಂತರ, ತಮ್ಮ ತೀರ್ಪನ್ನು 2025ರ ಜನವರಿ 3ಕ್ಕೆ ಕಾಯ್ದಿರಿಸಿದರು.

ಪ್ರಕರಣದ 11ನೇ ಆರೋಪಿಯಾಗಿರುವ ಅಲ್ಲು ಅರ್ಜುನ್ ಈ ಹಿಂದೆ ಜಾಮೀನು ಕೋರಿ ನ್ಯಾಯಾಲಯ ದಲ್ಲಿ ಅರ್ಜಿ ಸಲ್ಲಿಸಿದ್ದರು. ಡಿ. 27ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೂ ಹಾಜರಾಗಿದ್ದರು.

ಬಾಲಕ ಸ್ವಲ್ಪ ಚೇತರಿಕೆ: ಕಾಲ್ತುಳಿತದ ವೇಳೆ ಗಾಯಗೊಂಡಿದ್ದ 8 ವರ್ಷದ ಬಾಲಕ ಶ್ರೀತೇಜ್ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸುತ್ತಿದೆ ಚಿಕಿತ್ಸೆ ನೀಡುತ್ತಿರುವ ಇಲ್ಲಿನ ಆಸ್ಪತ್ರೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.