ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಪುಷ್ಪ 2’ ಸಿನಿಮಾದ ಹೊಸ ಹಾಡು: ಅಲ್ಲು ಅರ್ಜುನ್ ಜೊತೆ ಹೆಜ್ಜೆ ಹಾಕಿದ ರಶ್ಮಿಕಾ

Published 29 ಮೇ 2024, 6:05 IST
Last Updated 29 ಮೇ 2024, 6:05 IST
ಅಕ್ಷರ ಗಾತ್ರ

ಹೈದರಾಬಾದ್‌: ‘ಪುಷ್ಪ 2’ ಸಿನಿಮಾದ ಎರಡನೇ ವಿಡಿಯೊ ಲಿರೀಕಲ್‌ ಹಾಡು ಬುಧವಾರ ಬಿಡುಗಡೆಯಾಗಿದೆ.

ನಾಯಕ ಅಲ್ಲು ಅರ್ಜುನ್‌ ಹಾಗೂ ನಾಯಕಿ ರಶ್ಮಿಕಾ ಮಂದಣ್ಣ ಅವರು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಅಲ್ಲು ಅರ್ಜುನ್‌ ಮತ್ತು ರಶ್ಮಿಕಾ ಅವರ ಈ ಹಾಡಿಗೆ ಅಲ್ಲು ಅರ್ಜುನ್​ ಅಭಿಮಾನಿಗಳಿಂದ ಬಹುಪರಾಕ್‌ ಸಿಕ್ಕಿದೆ.

ಈ ಹಾಡು ಬಿಡುಗಡೆಯಾಗಿ ಕೆಲವೇ ಗಂಟೆಗಲ್ಲಿ ಲಕ್ಷಾಂತರ ವೀಕ್ಷಣೆ ಕಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಾಡಿಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. 

ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್​ ರಾಗ ಸಂಯೋಜಿಸಿರುವ ಈ ಹಾಡನ್ನು ‘ಟಿ ಸಿರೀಸ್​’ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಪುಷ್ಪ–1 ಸಿನಿಮಾ ಸಾಕಷ್ಟು ಸದ್ದು ಮಾಡಿತ್ತು. ಇದರ ಮುಂದುವರೆದ ಭಾಗವಾಗಿ ‘ಪುಷ್ಪ 2’ ಸಿನಿಮಾ ತೆರೆಗೆ ಬರಲಿದೆ. ನಿರ್ದೇಶಕ ಸುಕುಮಾರ್​ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. 

ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳಂ, ಬೆಂಗಾಲಿ ಭಾಷೆಗಳಲ್ಲಿ ‘ಪುಷ್ಪ 2’ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ.

ಹಾಡು ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT