ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಲ್ಲಿ ಬಾಯ್‌’ ಮೊಳಗಿಸಿದ ರಾಣ

Last Updated 21 ಸೆಪ್ಟೆಂಬರ್ 2022, 8:37 IST
ಅಕ್ಷರ ಗಾತ್ರ

ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ, ನಂದಕಿಶೋರ್ ನಿರ್ದೇಶನದ ‘ರಾಣ’ ಚಿತ್ರದ ‘ಗಲ್ಲಿ ಬಾಯ್’ ಹಾಡು ಸದ್ದು ಮಾಡಿದೆ. ಹಾಡಿಗೆ ಶ್ರೇಯಸ್‌ ಮತ್ತು ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ. ಚಂದನ್‌ ಶೆಟ್ಟಿ ಬರೆದು ಸಂಗೀತ ನಿರ್ದೇಶನ ಮಾಡಿರುವ ಈ ಹಾಡನ್ನು ನಿರ್ದೇಶಕ ಜೋಗಿ ಪ್ರೇಮ್‌ ಬಿಡುಗಡೆ ಮಾಡಿದರು. ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ.

‘ಚಂದನ್ ಶೆಟ್ಟಿ ಎಲ್ಲರ ಮನಸ್ಸಿಗೆಹತ್ತಿರವಾಗುವಂತಹ ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಅನಿರುದ್ಧ್‌ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಅವರ ಅದ್ಭುತ ಗಾಯನ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ರೀಷ್ಮಾ ನಾಣಯ್ಯ ಒಳ್ಳೆಯ ನೃತ್ಯಗಾರ್ತಿ. ನೃತ್ಯ ನಿರ್ದೇಶಕ ಇಮ್ರಾನ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ ಅವರ ಕಾರ್ಯವೈಖರಿ ಚೆನ್ನಾಗಿದೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ. ನವೆಂಬರ್11 ರಂದು ಚಿತ್ರ ತೆರೆಗೆ ಬರಲಿದೆ’ ಎಂದರು ನಾಯಕ ಶ್ರೇಯಸ್.

ಗುಜ್ಜಲ್ ಪುರುಷೋತ್ತಮ್ ಈ ಚಿತ್ರದ ನಿರ್ಮಾಪಕರು. ‘ರಾಣ’ ಒಂದೊಳ್ಳೆಯ ಕೌಟುಂಬಿಕ ಚಿತ್ರ. ಹಳ್ಳಿಯಿಂದ ನಗರಕ್ಕೆ ಬಂದು ನೆಲೆಸಿರುವವರ ಕುರಿತಾದ ಕಥೆಯಿದೆ. ನಂದಕಿಶೋರ್ ನಿರ್ದೇಶನ, ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಸೇರಿದಂತೆ ಎಲ್ಲರ ಕೆಲಸ ಚೆನ್ನಾಗಿದೆ ಎಂದರು ಕೆ.ಮಂಜು.

ನಂದಕಿಶೋರ್ ಈ ಚಿತ್ರದ ನಿರ್ದೇಶಕರು. ಹಾಡುಗಳು ಸುಂದರವಾಗಿದೆ. ಇದೇ ಮೊದಲ ಬಾರಿಗೆ ನಾನು ಹಿನ್ನೆಲೆ ಸಂಗೀತ ಕೂಡ ನೀಡಿದ್ದೇನೆ ಎಂದು ಸಂಗೀತದ ಬಗ್ಗೆ ಚಂದನ್ ಶೆಟ್ಟಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT