ಶುಕ್ರವಾರ, ಡಿಸೆಂಬರ್ 3, 2021
24 °C

ಚಿರಂಜೀವಿ ಸರ್ಜಾ ಮಗ ರಾಯನ್‌ಗೆ ಮೊದಲ ಹುಟ್ಟುಹಬ್ಬ: ಮೇಘನಾ ಮನೆಯಲ್ಲಿ ಸಡಗರ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜ್ಯೂ.ಚಿರು ಎಂದೇ ಕರೆಯಲ್ಪಡುವ ದಿವಂಗತ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್‌ ಅವರ ಮಗ ರಾಯನ್‌ ರಾಜ್‌ ಸರ್ಜಾಗೆ ಇಂದು (ಶುಕ್ರವಾರ) ಮೊದಲ ಜನ್ಮದಿನದ ಸಂಭ್ರಮ.

ಮಗನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಟಿ ಮೇಘನಾ, ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ರಾಯನ್‌ ಜೊತೆಗಿರುವ ಫೋಟೊವೊಂದನ್ನು ಹಂಚಿಕೊಂಡಿದ್ದು, ಶುಭ ಕೋರಿದ್ದಾರೆ.

‘ನಮ್ಮ ಮಗು, ನಮ್ಮ ಪ್ರಪಂಚ, ನಮ್ಮ ಜಗತ್ತು, ನಮ್ಮ ಸರ್ವಸ್ವ! ಚಿರು.. ನಮ್ಮ ರಾಜಕುಮಾರನಿಗೆ ಈಗ ಒಂದು ವರ್ಷ’ ಎಂಬ ಅಡಿ ಬರಹದೊಂದಿಗೆ ಮಗನ ಹುಟ್ಟುಹಬ್ಬದ ಸಂದೇಶವನ್ನು ಬರದುಕೊಂಡಿದ್ದಾರೆ. ಈ ಪೋಸ್ಟ್‌ಗೆ  ನಿರ್ದೇಶಕ ಪನ್ನಗ ಭರಣ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಕಾಮೆಂಟ್​ ಮಾಡುವ ಮೂಲಕ ರಾಯನ್‌ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ... ಮತ್ತೆ ತೆರೆಯ ಮೇಲೆ ಮೇಘನಾ, ಹೊಸ ಚಿತ್ರದಲ್ಲಿ ನಟನೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು