ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾಂಡಲ್‌ವುಡ್‌ನಲ್ಲಿ ರೇಚಲ್‌ ಡೇವಿಡ್‌ ಬ್ಯುಸಿ!

Last Updated 21 ಜುಲೈ 2022, 19:30 IST
ಅಕ್ಷರ ಗಾತ್ರ

ಮಲಯಾಳಂ ಸಿನಿಮಾ ಮೂಲಕ ಬೆಳ್ಳಿತೆರೆಗೆ ಹೆಜ್ಜೆಇಟ್ಟು, ‘ಲವ್‌ ಮಾಕ್ಟೇಲ್‌–2’ರಲ್ಲಿ ‘ಸಿಹಿ’ಯಾಗಿ ಅಭಿನಯಿಸಿದ್ದ ರೇಚಲ್‌ ಡೇವಿಡ್‌ ಸದ್ಯ ಚಂದನವನದಲ್ಲಿ ಸಾಲು ಸಾಲು ಸಿನಿಮಾಗಳಿಗೆ ಕಾಲ್‌ಶೀಟ್‌ ನೀಡುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರಮೋದ್‌–ಪೃಥ್ವಿ ಅಂಬಾರ್‌ ನಟನೆಯ ‘ಭುವನಂ ಗಗನಂ’ ಸಿನಿಮಾ ಸೆಟ್‌ಗೆ ಪ್ರವೇಶಿಸಿದ್ದ ರೇಚಲ್‌, ಇದೀಗ ಮತ್ತೊಂದು ಸಿನಿಮಾಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ.

ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ರೇಚಲ್‌ ನಾಯಕಿ. ಈ ಚಿತ್ರಕ್ಕೆ ‘ರಾಮಾ ರಾಮಾ ರೇ’ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಈ ಚಿತ್ರದ ಮೂಲಕ ಯುವನಟರೊಬ್ಬರು ನಾಯಕನಾಗಿ ಬೆಳ್ಳಿತೆರೆಗೆ ಹೆಜ್ಜೆ ಇಡಲಿದ್ದಾರೆ. 2018ರಲ್ಲಿ ತೆರೆಕಂಡ ಅನಂತನಾಗ್ ಅಭಿನಯದ ‘ವೀಕೆಂಡ್’ ಸಿನಿಮಾದಲ್ಲಿ ನಟಿಸಿದ್ದ ಮಿಲಿಂದ್ ಈ ಚಿತ್ರದ ನಾಯಕ. ನೂತನ ಚಿತ್ರದ ಶೀರ್ಷಿಕೆ ಶೀಘ್ರದಲ್ಲೇ ಅನಾವರಣಗೊಳ್ಳಲಿದೆ ಎಂದಿದೆ ಚಿತ್ರತಂಡ.

‘ಭಾಗ್ಯರಾಜ್’, ‘ರಾಜು ಜೇಮ್ಸ್ ಬಾಂಡ್’, ‘ಕಳ್ಬೆಟ್ಟದ ದರೋಡೆಕೋರರು’ ಸಿನಿಮಾ ನಿರ್ದೇಶಿಸಿರುವ ದೀಪಕ್ ಮಧುವನಹಳ್ಳಿ ಅವರ ನಾಲ್ಕನೇ ಸಿನಿಮಾ ಇದು. ರೋಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ, ಲವಿತ್ ಛಾಯಾಗ್ರಹಣ ಹಾಗೂ ಅಜಯ್ ಸಂಕಲನವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT