ಬುಧವಾರ, ಡಿಸೆಂಬರ್ 8, 2021
18 °C

'ರಾಧೆ ಶ್ಯಾಮ್‌' ಪೋಸ್ಟರ್‌: ಪ್ರೀತಿಗೆ ಹೊಸ ಭಾಷ್ಯ ಬರೆದ ಪ್ರಭಾಸ್‌, ಪೂಜಾ ಹೆಗ್ಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟಾಲಿವುಡ್‌ನ ಡಾರ್ಲಿಂಗ್‌ ಖ್ಯಾತಿಯ ’ಬಾಹುಬಲಿ’ ಪ್ರಭಾಸ್‌ ನಟನೆಯ ’ರಾಧೆ ಶ್ಯಾಮ್’ ಚಿತ್ರದ ಹೊಸ ಪೋಸ್ಟರ್‌ ಅನ್ನು ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ.

ಈ ಪೋಸ್ಟರ್‌ ನೋಡಿರುವ ಅಭಿಮಾನಿಗಳು ’ ಪ್ರಭಾಸ್‌ ಮತ್ತು ಪೂಜಾ ಹೆಗ್ಡೆ ಪ್ರೀತಿಗೆ ಹೊಸ ಭಾಷ್ಯ ಬರೆದಿದ್ದಾರೆ’ ಎಂಬ ಮೆಚ್ಚುಗೆಯ ಕಮೆಂಟ್‌ಗಳನ್ನು ಹಾಕುತ್ತಿದ್ದಾರೆ.  ಕಪ್ಪು ಶೂಟ್‌ನಲ್ಲಿ ಪ್ರಭಾಸ್‌ ಹಾಗೂ ನೀಲಿ ಗೌನಿನಲ್ಲಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ರೆಟ್ರೊ ಸ್ಟೈಲಿನ ಈ ಪೋಸ್ಟರ್‌ ಪ್ರಭಾಸ್‌ ಅಭಿಮಾನಿಗಳಿಗೆ ಸಖತ್‌ ಇಷ್ಟವಾಗಿದೆ.

ಪೋಸ್ಟರ್ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದಿದೆ. ಪ್ರಭಾಸ್‌ ಮತ್ತು ಪೂಜಾ ಹೆಗ್ಡೆ ಅಭಿಮಾನಿಗಳು ಈ ಪೋಸ್ಟರ್‌ ಅನ್ನು ಮತ್ತೆ ಮತ್ತೆ ಶೇರ್‌ ಮಾಡುತ್ತಿದ್ದಾರೆ. 

ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು ದೀಪಾವಳಿ ವೇಳೆಗೆ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ ಎನ್ನಲಾಗಿದೆ. ಒಂದು ವೇಳೆ ಕೋವಿಡ್ ಪರಿಣಾಮ ಲಾಕ್‌ಡೌನ್‌ ಜಾರಿಯಾದರೆ ಚಿತ್ರವನ್ನು ಒಟಿಟಿ ವೇದಿಕೆಯಲ್ಲಿ ಬಿಡುಗಡೆ ಮಾಡಲು ಚಿಂತಿಸಲಾಗಿದೆ ಎಂದು ಟಿ ಸೀರೀಸ್‌ನ ಸಂಸ್ಥೆ ತಿಳಿಸಿದೆ.

ಚಿತ್ರಕ್ಕೆ ರಾಧಾ ಕೃಷ್ಣ ಕುಮಾರ್ ಆಕ್ಷ್ಯನ್ ಕಟ್ ಹೇಳಿದ್ದು, ಈ ಚಿತ್ರವನ್ನು ಗೋಪಿ ಕೃಷ್ಣ ಮೂವೀಸ್, ಯುವಿ ಕ್ರಿಯೇಷನ್ಸ್ ಮತ್ತು ಟಿ ಸಿರೀಸ್ ನಿರ್ಮಿಸುತ್ತಿದೆ. ಸಚಿನ್ ಖೇಡೇಕರ್, ಪ್ರಿಯದರ್ಶಿ ಪುಲಿಕೊಂಡ, ಭಾಗ್ಯಶ್ರೀ, ಮುರ್ಲಿ ಶರ್ಮಾ, ಕುನಾಲ್ ರಾಯ್ ಕಪೂರ್, ರಿದ್ದಿ ಕುಮಾರ್, ಸಶಾ ಛೆಟ್ರಿ, ಸತ್ಯನ್ ಮುಂತಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸದ್ಯ ಪ್ರಭಾಸ್‌, ಸಲಾರ್‌, ಅದಿಪುರುಷ್‌ ಹಾಗೂ ಪ್ರೋಡಕ್ಷನ್‌ ಕೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು