ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಭಾಸ್‌–ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್‌’ ಚಿತ್ರದ ಬಿಡುಗಡೆ ಮುಂದೂಡಿಕೆ

Last Updated 5 ಜನವರಿ 2022, 9:38 IST
ಅಕ್ಷರ ಗಾತ್ರ

ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಮುಖ ಚಿತ್ರಗಳ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗುತ್ತಿದೆ.

ಆರ್‌ಆರ್‌ಆರ್‌, ಗೆಹರಾಯಿಯಾಸೇರಿದಂತೆ ಅನೇಕ ಚಿತ್ರಗಳಬಿಡುಗಡೆಯ ದಿನಾಂಕ ಬದಲಾಗಿದೆ. ಈ ಪಟ್ಟಿಗೆಪ್ರಭಾಸ್ ಮತ್ತು ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್’ ಸಿನಿಮಾ ಸಹ ಸೇರಿಕೊಂಡಿದೆ.

ಜನವರಿ 14ರಂದುರಾಧೆ ಶ್ಯಾಮ್ ಚಿತ್ರವುತೆರೆ ಕಾಣಬೇಕಿತ್ತು. ಆದರೆ, ಕೋವಿಡ್‌ ಹಿನ್ನೆಲೆಯಲ್ಲಿ ‘ರಾಧೆ ಶ್ಯಾಮ್’ ಚಿತ್ರವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿದೆ ಎಂದು ಚಿತ್ರತಂಡ ಖಚಿತಪಡಿಸಿದೆ.

ರಾಧಾ ಕೃಷ್ಣ ಕುಮಾರ್ ನಿರ್ದೇಶನದಚಿತ್ರವನ್ನು ಗೋಪಿ ಕೃಷ್ಣ ಮೂವೀಸ್, ಯುವಿ ಕ್ರಿಯೇಷನ್ಸ್ ಮತ್ತು ಟಿ ಸಿರೀಸ್ ನಿರ್ಮಿಸುತ್ತಿದೆ.

ಸಚಿನ್ ಖೇಡೇಕರ್, ಪ್ರಿಯದರ್ಶಿ ಪುಲಿಕೊಂಡ, ಭಾಗ್ಯಶ್ರೀ, ಮುರ್ಲಿ ಶರ್ಮಾ, ಕುನಾಲ್ ರಾಯ್ ಕಪೂರ್, ರಿದ್ದಿ ಕುಮಾರ್, ಸಶಾ ಛೆಟ್ರಿ, ಸತ್ಯನ್ ಮುಂತಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕಳೆದ ವರ್ಷ ಬಿಡುಗಡೆಯಾಗಿದ್ದ ಚಿತ್ರದ ಟ್ರೈಲರ್‌ಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರೊಮ್ಯಾಂಟಿಕ್ ಲವ್ ಸ್ಟೋರಿ ಹೊಂದಿರುವ ಈ ಚಿತ್ರವು ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ತೆರೆಕಾಣಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT