ಶನಿವಾರ, ಡಿಸೆಂಬರ್ 4, 2021
24 °C

‘ರಾಧೆ ಶ್ಯಾಮ್’ ಟೀಸರ್‌ ಬಿಡುಗಡೆ: ಕುತೂಹಲ ಹೆಚ್ಚಿಸಿದ ಪ್ರಭಾಸ್‌ ಪಾತ್ರದ ನಿಗೂಢತೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಟಾಲಿವುಡ್‌ ನಟ ಪ್ರಭಾಸ್‌ ಹುಟ್ಟುಹಬ್ಬಕ್ಕೆ ‘ರಾಧೆ ಶ್ಯಾಮ್’ ಚಿತ್ರತಂಡ ಟೀಸರ್‌ ಬಿಡುಗಡೆ ಮಾಡುವ ಮೂಲಕ ಭರ್ಜರಿ ಉಡುಗೊರೆ ನೀಡಿದೆ.

ರಾಧಾಕೃಷ್ಣ ಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ. ತೆಲುಗಿನ ಬಹು ನಿರೀಕ್ಷಿತ ಚಿತ್ರಗಳಲ್ಲಿ ಇದು ಒಂದಾಗಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಚಿತ್ರ ಮುಂದಿನ ವರ್ಷ ಜನವರಿ 14ರಂದು ಬಿಡುಗಡೆಯಾಗಲಿದೆ.

ಟೀಸರ್‌ನಲ್ಲಿ ಮಿಸ್ಟರಿ ಮ್ಯಾನ್‌ ಆಗಿ ಕಾಣಿಸಿಕೊಂಡಿರುವ ಪ್ರಭಾಸ್‌, 'ನನಗೆ ಎಲ್ಲಾ ಗೊತ್ತು. ಆದರೆ, ನಿಮಗೆ ಏನೂ ಹೇಳಲ್ಲ. ನಾನು ದೇವರಲ್ಲ. ಆದರೆ, ನಾನು ನಿಮ್ಮಂತೆಯೂ ಅಲ್ಲ' ಎಂದು ಡೈಲಾಗ್‌ ಹೊಡೆಯುತ್ತಾರೆ. ಈ ಟೀಸರ್‌ ಮೂಲಕ ರಾಧೆ-ಶ್ಯಾಮ್‌ ಚಿತ್ರದ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಿದಂತಾಗಿದೆ.

ಟೀಸರ್‌ ವೀಕ್ಷಿಸಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು