ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭೈರಾದೇವಿ’ಯಾದ ರಾಧಿಕಾ ಕುಮಾರಸ್ವಾಮಿ

Published 17 ನವೆಂಬರ್ 2023, 0:30 IST
Last Updated 17 ನವೆಂಬರ್ 2023, 0:30 IST
ಅಕ್ಷರ ಗಾತ್ರ

ರಾಧಿಕಾ ಕುಮಾರಸ್ವಾಮಿ ಅವರ ಜನ್ಮದಿನದ ಪ್ರಯುಕ್ತವಾಗಿ ‘ಭೈರಾದೇವಿ’ ಚಿತ್ರದ ಟೀಸರ್ ಹಾಗೂ ‘ಅಜಾಗ್ರತ’ ಚಿತ್ರದ ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. ಈ ಎರಡು ಚಿತ್ರಗಳು ಅವರ ಸಹೋದರ ರವಿರಾಜ್ ಅವರ ಶಮಿಕಾ ಎಂಟರ್‌ಪ್ರೈಸಸ್ ಮೂಲಕ ನಿರ್ಮಾಣಗೊಂಡಿವೆ.

‘ಭೈರಾದೇವಿ’ ನನ್ನ ಇಪ್ಪತ್ತು ವರ್ಷಗಳ ಸಿನಿಪಯಣದಲ್ಲೇ ವಿಭಿನ್ನವಾದ ಚಿತ್ರ. ಅಘೋರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ‌. ನನಗೆ ಸ್ಮಶಾನ ಎಂದರೆ ಭಯ. ಈ ಚಿತ್ರದ ಚಿತ್ರೀಕರಣ ಹೆಚ್ಚಿನ ಭಾಗ ಸ್ಮಶಾನದಲ್ಲೇ ನಡೆದಿದೆ. ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದು, ಸದ್ಯದಲ್ಲೇ ದಿನಾಂಕ ಘೋಷಣೆ ಮಾಡುತ್ತೇವೆ’’ ಎಂದರು ರಾಧಿಕಾ.

ಚಿತ್ರವನ್ನು ಶ್ರೀಜೈ ನಿರ್ದೇಶಿಸಿದ್ದಾರೆ. ಕನ್ನಡ, ತೆಲುಗು, ತಮಿಳು ಮೂರು ಭಾಷೆಗಳಲ್ಲಿ ಮೂಡಿಬಂದಿದೆ. ಮೂರು ಭಾಷೆಗಳಲ್ಲೂ ಪ್ರತ್ಯೇಕವಾಗಿ ಚಿತ್ರೀಕರಣ ಮಾಡಲಾಗಿದೆ. ‘ಅಜಾಗ್ರತ’ ಚಿತ್ರಕ್ಕೆ ಶಶಿಧರ್ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಕನ್ನಡ ಸೇರಿ ಏಳು ಭಾಷೆಗಳಲ್ಲಿ ಪ್ರತ್ಯೇಕವಾಗಿ ಮೂಡಿಬರುತ್ತಿರುವ ಚಿತ್ರವಿದು.

‘ಇದು ನನ್ನ ನಿರ್ದೇಶನದ ಎರಡನೇ ಚಿತ್ರ. ಪುಣೆಯಲ್ಲಿ ಫಿಲ್ಮ್‌ ಮೇಕಿಂಗ್ ಮಾಡಿದ್ದೇನೆ. ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಸೈಕಲಾಜಿಕಲ್ ಕ್ರೈಮ್ ಥ್ರಿಲ್ಲರ್ ಜಾನರ್ ಚಿತ್ರ’ ಎಂದರು ನಿರ್ದೇಶಕ ಶಶಿಧರ್‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT