ವಿಡಿಯೊ: ತನ್ಮಯಳಾದೆನು ತಿಳಿಯುವ ಮುನ್ನವೇ –ರಾಧಿಕಾ ಕುಮಾರಸ್ವಾಮಿ

ಚಂದನವನದ ತಾರೆ ರಾಧಿಕಾ ಕುಮಾರಸ್ವಾಮಿ ಮತ್ತೆ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
ಇದಕ್ಕೆ ಕಾರಣ, ರಾಧಿಕಾ ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆ ಮಾಡಿರುವ ವಿಡಿಯೊ! ಹೌದು, ರಾಧಿಕಾ ಕನ್ನಡದ ‘ಪರಮಾತ್ಮ‘ ಚಿತ್ರದ ರೊಮ್ಯಾಂಟಿಕ್ ಹಾಡಿಗೆ ಕಡಲತಡಿಯಲ್ಲಿ ರೀಲ್ ಮಾಡಿದ್ದಾರೆ. ಈ ವಿಡಿಯೊ ನೋಡಿರುವ ಅಭಿಮಾನಿಗಳು ರಾಧಿಕಾ ಮತ್ತೆ ಕನ್ನಡ ಸಿನಿಮಾಗೆ ಕಮ್ ಬ್ಯಾಕ್ ಮಾಡಲಿದ್ದಾರೆ ಎಂದು ಹೇಳುತ್ತಿದ್ದಾರೆ.
ಮುಸ್ಸಂಜೆ ಸಮಯದಲ್ಲಿ, ಚಲಿಸುವ ಬೋಟ್‌ನಲ್ಲಿ ರಾಧಿಕಾ ಸಿಂಪಲ್ ಗೌನ್ ತೊಟ್ಟು ‘ತನ್ಮಯಳಾದೆನು ತಿಳಿಯುವ ಮುನ್ನವೇ ‘ ಹಾಡಿಗೆ ರೀಲ್ ಮಾಡಿದ್ದಾರೆ. ಈ ವಿಡಿಯೊದಲ್ಲಿ ರಾಧಿಕಾ ಸುಂದರವಾಗಿ ಕಾಣುತ್ತಿದ್ದಾರೆ. ಇದಕ್ಕೆ ಅಭಿಮಾನಿಗಳು ಫಿದಾ ಆಗಿದ್ದು ಮತ್ತೆ ರಾಧಿಕಾ ಸಿನಿಮಾಗಳನ್ನು ಮಾಡಲಿ ಎಂದು ಕಾಮೆಂಟ್ ಹಾಕುತ್ತಿದ್ದಾರೆ.
ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ರಾಧಿಕಾ ಸಾಮಾಜಿಕ ಮಾಧ್ಯಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಅವರ ಹಿಂದಿನ ಡ್ಯಾನ್ಸ್ ವಿಡಿಯೊಗಳು ಸಹ ಸೂಪರ್ ಹಿಟ್ ಆಗಿದ್ದವು.
ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ ಅಲ್ಲ: ಕಿಚ್ಚ ಸುದೀಪ್ ಹೇಳಿಕೆಗೆ ಅಜಯ್ ದೇವಗನ್ ಕಿಡಿ
ರಾಧಿಕಾ ಹೊಸ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು ಅದರಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ.
ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ ಎಂದ ಅಜಯ್ ದೇವಗನ್ ಹೇಳಿಕೆಗೆ ನಟಿ ರಮ್ಯಾ ಕಿಡಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.