ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆನಪಿನಲ್ಲಿ ನೀವೀಗ ಎಂದಿಗಿಂತ ಸನಿಹ: ಅಪ್ಪುವನ್ನು ನೆನೆದು ರಾಧಿಕಾ ಪಂಡಿತ್‌ ಭಾವುಕ

Last Updated 10 ನವೆಂಬರ್ 2021, 12:16 IST
ಅಕ್ಷರ ಗಾತ್ರ

ಬೆಂಗಳೂರು: ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರನ್ನು ನೆನಪಿಸಿಕೊಂಡು ನಟಿ ರಾಧಿಕಾ ಪಂಡಿತ್‌ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದು, ‘ನಮಗೆಲ್ಲ ನೆನಪಿನಲ್ಲಿ ನೀವೀಗ ಎಂದಿಗಿಂತ ಸನಿಹ’ ಎಂದಿದ್ದಾರೆ.

ಪುನೀತ್‌ ಅವರ ಜೊತೆಗೆ ‘ಹುಡುಗರು’ ಹಾಗೂ ‘ದೊಡ್ಮನೆ ಹುಡ್ಗ’ ಚಿತ್ರದಲ್ಲಿ ರಾಧಿಕಾ ನಟಿಸಿದ್ದರು. ‘ನೀವು ಇನ್ನಿಲ್ಲ ಎನ್ನುವುದನ್ನು ಒಪ್ಪಿಕೊಳ್ಳಲು ಹೃದಯವು ಇನ್ನೂ ಒಪ್ಪುತ್ತಿಲ್ಲ. ಈ ನಷ್ಟವನ್ನು ಭರ್ತಿ ಮಾಡಲು ಸಾಧ್ಯವಿಲ್ಲ. ನೀವಿಲ್ಲದೆ ನಮ್ಮ ಈ ಚಿತ್ರರಂಗ ಹಿಂದಿನಂತೆ ಇರಲು ಸಾಧ್ಯವಿಲ್ಲ. ನಿಮ್ಮ ಜೊತೆ ಕಾರ್ಯನಿರ್ವಹಿಸಿದ ಹೆಮ್ಮೆ ನನಗಿದೆ. ಈ ಅವಕಾಶ ನೀಡಿರುವುದಕ್ಕೆ ಧನ್ಯವಾದ’ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಜೊತೆಗೆ ಇಷ್ಟು ದಿನವಾದರೂ ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದಕ್ಕೂ ಕಾರಣವನ್ನು ನೀಡಿರುವ ರಾಧಿಕಾ, ‘ಜೀವನದಲ್ಲಿ ಆದಷ್ಟು ಒಬ್ಬರ ಮೇಲೆ ಕೋಪ ಇದ್ದರೂ ಪ್ರೀತಿ ಹಂಚಿ, ತಾಳ್ಮೆಯಿರಲಿ. ನಾನು ಅಂತಿಮ ದರ್ಶನ ಪಡೆದೆನೋ ಇಲ್ಲವೊ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ, ನಮಗೆ ತಿಳಿದಿದೆ. ಕ್ಯಾಮೆರಾ ಮುಂದೆ ಬಂದು ಮಾತನಾಡುವ ಶಕ್ತಿ ನನಗಿರಲಿಲ್ಲ. ಕ್ಯಾಮೆರಾ ಮುಂದೆ ಬಂದು ಮಾತನಾಡದೆ ಇರುವುದು ದೊಡ್ಡ ತಪ್ಪು ಎಂದು ನಾನು ಭಾವಿಸಲಿರಲಿಲ್ಲ. ಅವರ ಮೇಲಿರುವ ಪ್ರೀತಿಗೆ ನೀವು ಹೀಗೆ ಮಾತನಾಡುತ್ತಿರುವುದು ಸಹಜ. ಅಪ್ಪು ಸರ್ ಅಗಲಿಕೆ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಾದ ನಿಮಗೆ ಎಷ್ಟು ನೋವು ನೀಡುತ್ತಿದೆಯೋ, ಅಷ್ಟೇ ನೋವು ನನಗೂ ನಮ್ಮ ಕುಟುಂಬಕ್ಕೂ ಆಗಿದೆ. ನಮ್ಮೆಲ್ಲರ ನೆಚ್ಚಿನ ಅಪ್ಪು ಸರ್ ಅಗಲಿಕೆ ಎಂದೆಂದಿಗೂ ನಮ್ನನ್ನು ಕಾಡುತ್ತಲೇ ಇರುತ್ತದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT