ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಟುಂಬದ ಫೋಟೊ ಹಂಚಿಕೊಂಡ ರಾಧಿಕಾ ಪಂಡಿತ್: ಯಶ್‌ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ

Last Updated 6 ಜುಲೈ 2022, 10:36 IST
ಅಕ್ಷರ ಗಾತ್ರ

ಬೆಂಗಳೂರು: ನಟಿ ರಾಧಿಕಾ ಪಂಡಿತ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಕುಟುಂದ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದ್ಯ ನಟನೆಯಿಂದ ದೂರ ಉಳಿದಿರುವ ರಾಧಿಕಾ, ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಮಕ್ಕಳಾದ
ಐರಾ, ಯಥರ್ವ್‌ ಹಾಗೂ ಪತಿ ಯಶ್‌ ಜೊತೆ ಇರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ರಾಧಿಕಾ, ಪದೇ ಪದೇ ಯಶ್‌ ಮತ್ತು ಮಕ್ಕಳ ಜೊತೆಗಿನ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಸದ್ಯ ಈ ಫೋಟೊ ಸಖತ್‌ ವೈರಲ್‌ ಆಗುತ್ತಿದೆ. ಯಶ್‌, ರಾಧಿಕಾ ಕುಟುಂಬ ನೋಡಿ ಅಭಿಮಾನಿಗಳು ಖುಷ್‌ ಆಗಿದ್ದಾರೆ.

2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದಲ್ಲಿ ರಾಧಿಕಾ ನಟಿಸಿದ್ದರು. ಇದಾದ ನಂತರದಲ್ಲಿ ಅವರು ಯಾವುದೇ ಚಿತ್ರ ಒಪ್ಪಿಕೊಂಡಿಲ್ಲ. ಯಶ್‌ ಅವರ ಕೆ.ಜಿ.ಎಫ್‌–2 ಸಿನಿಮಾ ಭಾರತೀಯ ಸಿನಿಮಾ ಇತಿಹಾಸದಲ್ಲೇ ದಾಖಲೆಯ ಗಳಿಕೆ ಕಂಡಿದೆ.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT