ಬೆಂಗಳೂರು: ಕನ್ನಡ ಚಿತ್ರರಂಗದ ಪಿಆರ್ಒ ಆಗಿದ್ದ ದಿವಂಗತ ಡಿ.ವಿ.ಸುಧೀಂದ್ರ ಅವರು ಸ್ಥಾಪಿಸಿದ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ‘ಸಿನಿಮಾ ಪಿಆರ್ಒಗಳನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ನಿರ್ದೇಶಕರನ್ನಾಗಿಸಲು ಮತ್ತು ಸರ್ಕಾರದ ಸಿನಿಮಾ ಪ್ರಶಸ್ತಿಗೆ ಪರಿಗಣಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು.

ನಿರ್ಮಾಪಕರಾದ ಮೀನಾಕ್ಷಿ ಕೆ.ವಿ. ಜಯರಾಂ ಹಾಗೂ ಪತ್ರಕರ್ತ ಕೆ.ಜೆ.ಕುಮಾರ್ ಅವರು ‘ಶ್ರೀ ರಾಘವೇಂದ್ರ ಚಿತ್ರವಾಣಿ’ ಪ್ರಶಸ್ತಿಗೆ ಭಾಜನರಾದರು. ಗಾಯಕಿ ಅನುರಾಧಾ ಭಟ್ ಅವರಿಗೆ ‘ಡಾ.ರಾಜ್ಕುಮಾರ್ ಪ್ರಶಸ್ತಿ’, ಓಂಪ್ರಕಾಶ್ ರಾವ್ ಅವರಿಗೆ ‘ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ’, ನಟಿ ರೇಖಾರಾವ್ ಅವರಿಗೆ ‘ಡಾ.ಜಯಮಾಲ ಎಚ್.ಎಂ.ರಾಮಚಂದ್ರ ಪ್ರಶಸ್ತಿ’, ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ಅರ್ಜುನ್ ಜನ್ಯ ಅವರಿಗೆ ‘ಎಂ.ಎಸ್. ರಾಮಯ್ಯ ಮೀಡಿಯಾ ಆ್ಯಂಡ್ ಎಂಟರ್ಟೈನ್ಮೆಂಟ್ ಪ್ರೈ.ಲಿ. ಪ್ರಶಸ್ತಿ’, ‘ಶಿವಮ್ಮ’ ಚಿತ್ರದ ಕಥಾಲೇಖನಕ್ಕಾಗಿ ಜೈಶಂಕರ್ ಆರ್ಯರ್ ಅವರಿಗೆ ‘ಕೆ.ವಿ. ಜಯರಾಂ ಪ್ರಶಸ್ತಿ’, ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಸಂಭಾಷಣೆಗಾಗಿ ಚಂದ್ರಜಿತ್ ಬೆಳ್ಯಪ್ಪ ಅವರಿಗೆ ‘ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ’, ‘ಫೋಟೋ’ ಚಿತ್ರದ ನಿರ್ದೇಶನಕ್ಕಾಗಿ ಉತ್ಸವ್ ಗೋನವಾರ ಅವರಿಗೆ ‘ಬಿ. ಸುರೇಶ ಪ್ರಶಸ್ತಿ’, ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ‘ದ್ವಾಪರ’ ಹಾಡಿನ ಗೀತರಚನೆಗಾಗಿ ವಿ.ನಾಗೇಂದ್ರ ಪ್ರಸಾದ್ ಅವರಿಗೆ ‘ಪಿ.ಜಿ. ಶ್ರೀನಿವಾಸಮೂರ್ತಿ ಸ್ಮರಣಾರ್ಥ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ‘ಗೌರಿ’ ಚಿತ್ರದಲ್ಲಿನ ನಟನೆಗಾಗಿ ಸಮರ್ಜಿತ್ ಲಂಕೇಶ್ ಅವರು ‘ಶ್ರೀ ರಾಘವೇಂದ್ರ ಚಿತ್ರವಾಣಿ ವಿಶೇಷ ಪ್ರಶಸ್ತಿ’ಗೆ ಭಾಜನರಾದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ. ನರಸಿಂಹಲು, ಕನ್ನಡ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಪತ್ರಕರ್ತೆ ವಿಜಯಮ್ಮ, ನಿರ್ದೇಶಕ ಇಂದ್ರಜಿತ್ ಲಂಕೇಶ್, ಪತ್ರಕರ್ತ ಸದಾಶಿವ ಶೆಣೈ, ನಟಿ ರಾಗಿಣಿ ದ್ವಿವೇದಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.