ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀ ರಾಘವೇಂದ್ರ ಚಿತ್ರವಾಣಿ ವಾರ್ಷಿಕ ಪ್ರಶಸ್ತಿ ಪ್ರಕಟ

ಹೇಮಂತ್‌ ರಾವ್‌ಗೆ ಅತ್ಯುತ್ತಮ ಕಥಾಲೇಖಕ ಪ್ರಶಸ್ತಿ
Published 11 ಜನವರಿ 2024, 13:04 IST
Last Updated 11 ಜನವರಿ 2024, 13:04 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಪ್ರಚಾರಕರ್ತರಾಗಿ ಛಾಪು ಮೂಡಿಸಿದ್ದ ದಿವಂಗತ ಡಿ.ವಿ. ಸುಧೀಂದ್ರ ಅವರ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು 2023ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದೆ.  

ಚಲನಚಿತ್ರ ನಿರ್ಮಾಪಕ ದಿವಂಗತ ರಾಮು ಹಾಗೂ ಚಲನಚಿತ್ರ ಪತ್ರಕರ್ತರಾದ ಮುರಳೀಧರ ಖಜಾನೆ ಅವರಿಗೆ ‘ಶ್ರೀ ರಾಘವೇಂದ್ರ ಚಿತ್ರವಾಣಿ’ ಪ್ರಶಸ್ತಿ, ಹಿನ್ನಲೆ ಗಾಯಕ ಹೇಮಂತ್ ಕುಮಾರ್ ಅವರಿಗೆ ಡಾ. ರಾಜ್‌ಕುಮಾರ್ ಪ್ರಶಸ್ತಿ, ನಿರ್ದೇಶಕ  ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಆರ್.ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ, ನಟಿ ಜಯಲಕ್ಷ್ಮಿ ಪಿ. ಅವರಿಗೆ ಜಯಮಾಲ ಎಚ್.ಎಂ.ರಾಮಚಂದ್ರ ಪ್ರಶಸ್ತಿ, ‘ಹೊಂದಿಸಿ ಬರೆಯಿರಿ’ ಚಿತ್ರಕ್ಕಾಗಿ ಸಂಗೀತ ನಿರ್ದೇಶಕ ಜೋ ಕೋಸ್ಟ ಅವರಿಗೆ ಎಂ.ಎಸ್.ರಾಮಯ್ಯ ಮೀಡಿಯಾ ಆ್ಯಂಡ್‌ ಎಂಟರ್‌ಟೈನ್‌ಮೆಂಟ್ ಪ್ರೈ.ಲಿ. ಪ್ರಶಸ್ತಿ, ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರಕ್ಕಾಗಿ ನಿರ್ದೇಶಕ ಹೇಮಂತ್‌ ರಾವ್‌ಗೆ ಕೆ.ವಿ. ಜಯರಾಂ ಅವರ ಹೆಸರಿನಲ್ಲಿ ಅತ್ಯುತ್ತಮ ಕಥಾಲೇಖಕ ಪ್ರಶಸ್ತಿ, ‘ ‘ವಿರಾಟಪುರ ವಿರಾಗಿ’ ಚಿತ್ರಕ್ಕಾಗಿ ಬಿ.ಎಸ್. ಲಿಂಗದೇವರು ಹಾಗೂ ಶರಣು ಹುಲ್ಲೂರು ಅವರಿಗೆ ಅತ್ಯುತ್ತಮ ಸಂಭಾಷಣೆ ಪ್ರಶಸ್ತಿ, ‘ಆಚಾರ್ & ಕೋ’ ಚಿತ್ರದ ನಿರ್ದೇಶನಕ್ಕಾಗಿ ಸಿಂಧು ಶ್ರೀನಿವಾಸಮೂರ್ತಿಗೆ ಬಿ.ಸುರೇಶ್ ಪ್ರಶಸ್ತಿ, ‘ಟಗರು ಪಲ್ಯ’ ಚಿತ್ರದ ‘ಸಂಬಂಜ ಅನ್ನೋದು ದೊಡ್ಡದು ಕನಾ’ ಗೀತರಚನೆಗಾಗಿ ನಟ ‘ಡಾಲಿ’ ಧನಂಜಯ ಅವರಿಗೆ ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಹಾಗೂ ನಟ ಸುಂದರರಾಜ್ ಅವರಿಗೆ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ ಘೋಷಣೆಯಾಗಿದೆ. 

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 48ನೇ ವಾರ್ಷಿಕೋತ್ಸವ ಹಾಗೂ 23ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 27ರ ಸಂಜೆ 5.30ಕ್ಕೆ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಲಿದೆ ಎಂದು ಕನ್ನಡ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತರಾದ ಪತ್ರಕರ್ತ ಬಿ.ಎನ್. ಸುಬ್ರಹ್ಮಣ್ಯ, ನಟರಾದ ರಕ್ಷಿತ್ ಶೆಟ್ಟಿ ಹಾಗೂ ಅನಿರುದ್ಧ್ ಜತಕರ್ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು ಎಂದು ಸಂಸ್ಥೆಯು ತಿಳಿಸಿದೆ. 

ಧನಂಜಯ
ಧನಂಜಯ
ಸಿಂಧು ಶ್ರೀನಿವಾಸಮೂರ್ತಿ
ಸಿಂಧು ಶ್ರೀನಿವಾಸಮೂರ್ತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT