ಮಂಗಳವಾರ, ಮಾರ್ಚ್ 28, 2023
22 °C

‘ಅಪ್ಪು’ ನೋಡಲು ಅಭಿಮಾನಿಗಳ ಸಾಗರವೇ ಹರಿದು ಬರುತ್ತಿದೆ: ರಾಘವೇಂದ್ರ ರಾಜ್‌ಕುಮಾರ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್ ಅವರು ನಿಧನರಾಗಿ ಇಂದಿಗೆ ಒಂಬತ್ತು ದಿನಗಳು ಕಳೆದಿವೆ. ಪುನೀತ್ ಅಗಲಿಕೆಯ ಅಘಾತದಿಂದ ನಾಡಿನ ಜನತೆ ಹೊರಬಂದಿಲ್ಲ. ‘ಅಪ್ಪು’ ನೆನೆದು ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಪುನೀತ್‌ರನ್ನು ಕಳೆದುಕೊಂಡು ಪತ್ನಿ ಅಶ್ವಿನಿ, ಮಕ್ಕಳು, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಮತ್ತು ಕುಟುಂಬಸ್ಥರು ದುಃಖದಲ್ಲಿದ್ದಾರೆ. ಪ್ರತಿ ದಿನ ತಮ್ಮನೊಂದಿಗಿನ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಸಿಹಿ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

‘ಅಪ್ಪುನ ನೋಡಲು ಅಭಿಮಾನಿಗಳ ಸಾಗರವೇ ಹರಿದು ಬರುತ್ತಿದೆ. ನಿನ್ನೆ ಸುಮಾರು 1 ಲಕ್ಷಕ್ಕಿಂತಲೂ ಅಧಿಕ ಮಂದಿ ಬಿಸಿಲು ಹಾಗೂ ಮಳೆ ಎಂದು ಏನೂ ಲೆಕ್ಕಿಸದೆ ಅವನನ್ನು ನೋಡಲು ಬಂದಿದ್ದಾರೆ. ನಿಮ್ಮ ಅಭಿಮಾನಕ್ಕೆ ಧನ್ಯವಾದಗಳು’ ಎಂದಿರುವ ರಾಘಣ್ಣ, ಅಭಿಮಾನಿಗಳು ಸರದಿ ಸಾಲಿನಲ್ಲಿ ನಿಂತಿರುವ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಇತ್ತ ಪುನೀತ್‌ ಅಕಾಲಿಕ ನಿಧನ ಕನ್ನಡ ಚಿತ್ರರಂಗವನ್ನು ಚಿಂತೆಗೀಡು ಮಾಡಿದೆ. ‘ಅಪ್ಪು’ ಚಿತ್ರರಂಗದ ನಟ – ನಟಿಯರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಹಾಗಾಗಿ ಅವರ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ. ಇತ್ತ ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೊಗೆ ಭೇಟಿ ನೀಡಿ ಪುನೀತ್‌ ಸಮಾಧಿಗೆ ನಮನ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ... ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಮನೆಗೆ ಭೇಟಿ ನೀಡಿ ಸಿ.ಎಂ ಬೊಮ್ಮಾಯಿ ಸಾಂತ್ವನ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು