ವರಮಹಾಲಕ್ಷ್ಮಿ ಹಬ್ಬಕ್ಕೆ ನಿಗದಿಯಾಗಿದ್ದ ನವರಸನಾಯಕ ಜಗ್ಗೇಶ್ ಅವರ ನಗುವಿನ ರಸದೌತಣ ಕಾರಣಾಂತರಗಳಿಂದ ಮುಂದೂಡಲ್ಪಟ್ಟಿದೆ. ಆ.5ರಂದು ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಯಾಗುತ್ತಿಲ್ಲ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

‘ಕಾರಣಾಂತರಗಳಿಂದ ನಿಮ್ಮಿಷ್ಟದ ರಸದೌತಣ ಸ್ವಲ್ಪ ವಿಳಂಬವಾಗುತ್ತಿದೆ’ ಎಂದು ಸಂತೋಷ್ ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಜುಲೈ 28ರಂದು ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಬಿಡುಗಡೆಯಾಗುತ್ತಿದ್ದು, ಆಗಸ್ಟ್ 12ರಂದು ಗಣೇಶ್ ನಟನೆಯ ‘ಗಾಳಿಪಟ–2’ ಸಿನಿಮಾ ರಿಲೀಸ್ ಆಗಲಿದೆ. ಈ ಎರಡು ಸಿನಿಮಾ ಬಿಡುಗಡೆಯಿಂದ ಎದುರಾಗುವ ಚಿತ್ರಮಂದಿರಗಳ ಸಮಸ್ಯೆಯೂ ಚಿತ್ರ ಮುಂದೂಡಿಕೆಗೆ ಕಾರಣ ಎನ್ನಲಾಗಿದೆ. ಜೊತೆಗೆ ಸಿನಿಮಾದ ನಾಯಕ ಜಗ್ಗೇಶ್ ಅವರು ರಾಜ್ಯಸಭಾ ಸದಸ್ಯರಾದ ಬಳಿಕ ರಾಜಕೀಯದಲ್ಲೇ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಇದನ್ನು ಹೊಂದಿಸಿಕೊಂಡು ಪ್ರಚಾರಕ್ಕೂ ಯಾವುದೇ ಸಮಸ್ಯೆಯಾಗದಂತೆ ಸಿನಿಮಾ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿದೆ.

ಹೊಂಬಾಳೆ ಫಿಲ್ಮ್ಸ್ ಹಾಗೂ ನಿರ್ದೇಶಕ ಸಂತೋಷ್ ಆನಂದರಾಮ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿದ್ದ ‘ರಾಜಕುಮಾರ’ ಹಾಗೂ ‘ಯುವರತ್ನ’ ಬಾಕ್ಸ್ ಆಫೀಸ್‌ನಲ್ಲಿ ಗೆದ್ದಿದ್ದವು. ಇದಾದ ಬಳಿಕ ‘ರಾಘವೇಂದ್ರ ಸ್ಟೋರ್ಸ್’ ಮೂಲಕ ಮತ್ತೊಮ್ಮೆ ಹೊಂಬಾಳೆ ಫಿಲ್ಮ್ಸ್, ಸಂತೋಷ್ ಅವರ ಜೊತೆ ಕೈಜೋಡಿಸಿತ್ತು.ಹೊಂಬಾಳೆ ಫಿಲ್ಮ್ಸ್‌ನ 12ನೇ ಚಿತ್ರವಾಗಿ ‘ರಾಘವೇಂದ್ರ ಸ್ಟೋರ್ಸ್’ ಸೆಟ್ಟೇರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.