ಸೋಮವಾರ, ಅಕ್ಟೋಬರ್ 18, 2021
26 °C

ಹೊಂಬಾಳೆ ಫಿಲಂಸ್: 'ರಾಘವೇಂದ್ರ ಸ್ಟೋರ್ಸ್’ಗೆ ಜಗ್ಗೇಶ್‌ ನಾಯಕ, ಸಂತೋಷ್‌ ನಿರ್ದೇಶಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಹೊಂಬಾಳೆ ಫಿಲಂಸ್’ ಸಂಸ್ಥೆಯ ಮುಖ್ಯಸ್ಥ ವಿಜಯ್ ಕಿರಗಂದೂರು ತಮ್ಮ ಬ್ಯಾನರ್‌ ಅಡಿಯಲ್ಲಿ 12ನೇ ಚಿತ್ರವನ್ನು ಘೋಷಣೆ ಮಾಡಿದ್ದಾರೆ. 

ನವರಸ ನಾಯಕ ಜಗ್ಗೇಶ್‌ ನಾಯಕರಾಗಲಿದ್ದು, ಸಂತೋಷ್ ಆನಂದ್ ರಾಮ್ ನಿರ್ದೇಶನವಿರುವ ಈ ಚಿತ್ರಕ್ಕೆ  'ರಾಘವೇಂದ್ರ ಸ್ಟೋರ್ಸ್’ ಎಂದು ಹೆಸರಿಡಲಾಗಿದೆ. 

ಈ ಸಿನಿಮಾದ ಫಸ್ಟ್ ಲುಕ್ ಅನ್ನು ಹೊಂಬಾಳೆ ಫಿಲ್ಮ್ಸ್ ನಾನಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಪೋಸ್ಟರ್ ಗಮನಿಸಿದರೆ ಇದೊಂದು ಹೋಟೆಲ್ ಕುರಿತಾದ ಕಥೆ ಎಂದು ಮೇಲ್ಮೋಟಕ್ಕೆ ಗೊತ್ತಾಗುತ್ತಿದೆ.

ಈಗಾಗಲೇ ಹೊಂಬಾಳೆ ಫಿಲ್ಮ್ಸ್ ಸಾಲು ಸಾಲು ಚಿತ್ರಗಳನ್ನು ಘೋಷಣೆ ಮಾಡಿದ್ದು ಆ ಸಾಲಿಗೆ  'ರಾಘವೇಂದ್ರ ಸ್ಟೋರ್ಸ್’ ಕೂಡ ಸೇರ್ಪಡೆಯಾಗಿದೆ. 

2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ‘ನಿನ್ನಿಂದಲೇ’ ಸಿನಿಮಾ ಮೂಲಕ ಹೊಂಬಾಳೆ ಫಿಲ್ಮ್ಸ್ ಸಿನಿಯಾನವನ್ನು ಆರಂಭಿಸಿತು. ನಂತರ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಮಾಸ್ಟರ್‌ ಪೀಸ್’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿತ್ತು.

2017ರಲ್ಲಿ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ನಿರ್ಮಾಣವಾದ ‘ರಾಜಕುಮಾರ’ ಚಿತ್ರ ಸೂಪರ್ ಡ್ಯೂಪರ್ ಹಿಟ್ ಆಗಿತ್ತು. ಕನ್ನಡ ಚಿತ್ರರಂಗದಲ್ಲೇ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರಗಳ ಪೈಕಿ ‘ರಾಜಕುಮಾರ’ ಚಿತ್ರವೂ ಒಂದು ಎನಿಸಿಕೊಂಡಿತು. ನಂತರ ನಿರ್ಮಾಣವಾದ ಕೆಜಿಎಫ್‌ ಚಿತ್ರ ದೇಶದ ಗಮನ ಸೆಳೆಯುವ ಮೂಲಕ ಭರ್ಜರಿ ಕಲೆಕ್ಷನ್ ಮಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು