ವರಲಕ್ಷ್ಮೀ ಶರತ್ಕುಮಾರ್ ಹಾಗೂ ರಾಗಿಣಿ ದ್ವಿವೇದಿ ಮುಖ್ಯಭೂಮಿಕೆಯಲ್ಲಿರುವ ‘ಪೊಲೀಸ್ ಕಂಪ್ಲೈಂಟ್’ ಸಿನಿಮಾದ ಟೀಸರ್ ಹಾಗೂ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

‘ಅನು’, ‘ದಂಡು’, ‘ಆಪ್ತ’ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಂಜೀವ ಮಗೋಟಿ ಈ ಸಿನಿಮಾವನ್ನು ನಿರ್ದೇಶಿಸಿದ್ದು, ಎ.ಎಸ್.ಕೆ. ಪ್ರಮೀದಾಶ್ರೀ ಫಿಲಂಸ್ ಬ್ಯಾನರ್ನಡಿ ನಿರ್ಮಾಣವಾಗಿದೆ. ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ ಸಿನಿಮಾ ಬಿಡುಗಡೆಗೆ ಸಿದ್ಧತೆ ಆರಂಭಿಸಿದೆ. ಜೂನ್–ಜುಲೈ ವೇಳೆಗೆ ಸಿನಿಮಾವನ್ನು ತೆರೆಗೆ ತರುವ ಯೋಚನೆಯಲ್ಲಿ ಚಿತ್ರತಂಡವಿದೆ.

ಚಿತ್ರದ ಬಗ್ಗೆ ಮಾಹಿತಿ ನೀಡಿದ ಸಂಜೀವ್, ‘ಇದೊಂದು ಆ್ಯಕ್ಷನ್, ಹಾರರ್-ಥ್ರಿಲ್ಲರ್ ಕಥಾಹಂದರದ ಸಿನಿಮಾ. ನಾವು ಮಾಡಿದ ಕರ್ಮ ಹೇಗೆ ನಮ್ಮನ್ನು ಕಾಡುತ್ತದೆ ಎಂಬ ಒಂದು ಎಳೆಯನ್ನು ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಕನ್ನಡ ಮತ್ತು ತೆಲುಗಿನ 50ಕ್ಕೂ ಹೆಚ್ಚಿನ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಈ ಸಿನಿಮಾ ನಿರ್ಮಾಣವಾಗಿದ್ದು, ಏಕಕಾಲಕ್ಕೆ ಎರಡೂ ಭಾಷೆಗಳಲ್ಲೂ ಸಿನಿಮಾವನ್ನು ತೆರೆಗೆ ತರುವ ಯೋಜನೆಯಿದೆ’ ಎಂದರು.

‘ನನ್ನ ಸಿನಿಮಾ ಪಯಣದಲ್ಲಿ ಇದೊಂದು ವಿಭಿನ್ನ ಸಿನಿಮಾ. ಇದರಲ್ಲಿ ತಾಯಿ ಮತ್ತು ಮಗುವಿನ ಸಂಬಂಧದ ಸುತ್ತ ಕಥೆಯಿದೆ. ಆ್ಯಕ್ಷನ್, ಹಾರರ್ ಜೊತೆಗೆ ಭಾವನಾತ್ಮಕ ದೃಶ್ಯಗಳೂ ಇವೆ. ಎಲ್ಲಾ ಮಾದರಿಯ ಪ್ರೇಕ್ಷಕರಿಗೆ ಸಿನಿಮಾ ಹತ್ತಿರವಾಗಲಿದೆ’ ಎನ್ನುತ್ತಾರೆ ರಾಗಿಣಿ.

ಚಿತ್ರಕ್ಕೆ ಹರೀಶ್ ಸೊಂಡೇಕೊಪ್ಪ ಛಾಯಾಚಿತ್ರಗ್ರಹಣವಿದೆ. ಚಿತ್ರದಲ್ಲಿ ನವೀನ್ ಚಂದ್ರ, ಕೃಷ್ಣ ಸಾಯಿ ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರವಿಶಂಕರ್, ಶರತ್ ಲೋಹಿತಾಶ್ವ, ಅನಿಲ್ ರಾಜ್, ಸಪ್ತಗಿರಿ, ಪೃಥ್ವಿರಾಜ್, ಜೆಮಿನಿ ಸುರೇಶ್ ಮುಂತಾದ ಕಲಾವಿದರು ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.