ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲೆಳೆಯುತ್ತಾರೆ ರಾಗಿಣಿ ದ್ವಿವೇದಿ

Last Updated 13 ಏಪ್ರಿಲ್ 2023, 19:30 IST
ಅಕ್ಷರ ಗಾತ್ರ

ನಟಿ ರಾಗಿಣಿ ದ್ವಿವೇದಿ, ಚಂದನ್‌ ಶೆಟ್ಟಿ ಜತೆ ‘ಎಲ್ರ ಕಾಲೆಳೆಯತ್ತೆ ಕಾಲ’ತಂಡ ಸೇರಿಕೊಂಡಿದ್ದಾರೆ. ಕಾಲೆಳೆಯಲು ಇಬ್ಬರು ನಾಯಕಿಯರಾ ಎಂಬ ಅನುಮಾನ ಬೇಡ. ಚಿತ್ರದ ಪ್ರಚಾರಕ್ಕಾಗಿ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಅದರಲ್ಲಿ ನಟ ಚಂದನ್‌ ಶೆಟ್ಟಿ ಮತ್ತು ರಾಗಿಣಿ ಜತೆಯಾಗಿ ನಟಿಸಿದ್ದಾರೆ.

ಉಷಾ ಗೋವಿಂದರಾಜು ನಿರ್ಮಾಣದ ಚಿತ್ರವನ್ನು ಸುಜಯ್ ಶಾಸ್ತ್ರಿ ನಿರ್ದೇಶಿಸುತ್ತಿದ್ದಾರೆ. ಈ ಪ್ರಚಾರ ಗೀತೆಯನ್ನು ಚಂದನ್ ಶೆಟ್ಟಿ ಅವರೇ ಬರೆದಿದ್ದು, ಮಂಗ್ಲಿ ಹಾಗೂ ಚಂದನ್ ಶೆಟ್ಟಿ ಹಾಡಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡಿಗೆ ಮಾತ್ರ ಚಂದನ್ ಶೆಟ್ಟಿ ಅವರೆ ಸಂಗೀತ ನೀಡಿದ್ದಾರೆ. ಪ್ರವೀಣ್-ಪ್ರದೀಪ್ ಈ ಚಿತ್ರದ ಸಂಗೀತ ನಿರ್ದೇಶಕರು.

‘ನಾನು ‘ಕೆಂಪೇಗೌಡ’ ಚಿತ್ರದಿಂದಲೂ ರಾಗಿಣಿ ಅವರ ಅಭಿಮಾನಿ. ಈಗ ಅವರ ಜತೆ ಹಾಡೊಂದರಲ್ಲಿ ನಟಿಸಿರುವುದು ಸಂತೋಷವಾಗಿದೆ. ಹಾಡು ಹಾಗೂ ಚಿತ್ರ ಎಲ್ಲರ ಮನ ಗೆಲಲ್ಲಿದೆ. ಇದು ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ’ ಎಂದರು ನಾಯಕ ಚಂದನ್ ಶೆಟ್ಟಿ.

‘ಈ ಹಾಡು ಚೆನ್ನಾಗಿದೆ. ಚಂದನ್ ಶೆಟ್ಟಿ ಪ್ರತಿಭಾವಂತ. ಅವರು ಸಂಗೀತ ನೀಡಿ, ಹಾಡುವ ಹಾಡುಗಳು ನನಗೆ ಇಷ್ಟ‌. ಬಹಳ ದಿನಗಳಿಂದ ಅವರ ಜೊತೆ ನಟಿಸುವ ಕುರಿತು ಮಾತುಕತೆ ನಡೆಯುತ್ತಿತ್ತು. ಈಗ ಈ ಚಿತ್ರದ ಪ್ರಮೋಷನ್ ಸಾಂಗ್‌ನಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ’ ಎಂದು ತಿಳಿಸಿದ ನಟಿ ರಾಗಿಣಿ ದ್ವಿವೇದಿ, ಚಿತ್ರಕ್ಕೆ ಶುಭ ಕೋರಿದರು. ಬಳಿಕ ಚಿತ್ರತಂಡ ಒಟ್ಟಾಗಿ ಹಾಡಿಗೆ ಹೆಜ್ಜೆ ಹಾಕಿತು.

‘ಇದು 80/90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಚಿತ್ರದ ಬಹುತೇಕ ಕೆಲಸ ಮುಗಿದಿದ್ದು, ಸದ್ಯದಲ್ಲೇ ನಿಮ್ಮ ಮುಂದೆ ಬರುತ್ತೇವೆ’ ಎಂದು ನಿರ್ದೇಶಕ ಸುಜಯ್ ಶಾಸ್ತ್ರಿ ತಿಳಿಸಿದರು.

ನಾಯಕಿ ಅರ್ಚನಾ ಕೊಟ್ಟಿಗೆ, ರಜನಿಕಾಂತ್, ರಾಕೇಶ್ ಪೂಜಾರಿ, ಕಥೆ ಬರೆದಿರುವ ರಾಜ್ ಗುರು, ಛಾಯಾಗ್ರಹಕ ವಿಶ್ವಜಿತ್ ರಾವ್ ಚಿತ್ರದ ಕುರಿತು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT