ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಟೋಬಿ’ ಚೆನ್ನಾಗಿಲ್ಲ ಎಂದ ಯುವತಿಗೆ ಕಿರುಕುಳ: ಕ್ಷಮೆ ಕೇಳಿದ ರಾಜ್‌ ಬಿ. ಶೆಟ್ಟಿ

Published 26 ಆಗಸ್ಟ್ 2023, 13:00 IST
Last Updated 26 ಆಗಸ್ಟ್ 2023, 13:00 IST
ಅಕ್ಷರ ಗಾತ್ರ

ಬೆಂಗಳೂರು: ‘ಟೋಬಿ’ ಸಿನಿಮಾ ಚೆನ್ನಾಗಿಲ್ಲ ಎಂದು ಹೇಳಿದ ಯುವತಿಗೆ ಯವಕನೊಬ್ಬ ನಿಂದಿಸಿದ ಪ್ರಕರಣ ಸಂಬಂಧ, ಚಿತ್ರನಟ ರಾಜ್‌ ಬಿ. ಶೆಟ್ಟಿಯವರು ಕ್ಷೆಮೆ ಕೋರಿದ್ದಾರೆ.

ದೌರ್ಜನ್ಯಕ್ಕೀಡಾದ ಯುವತಿ ಜತೆ ಕ್ಷಮೆ ಕೇಳುತ್ತೇನೆ ಎಂದು ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಸಿನಿಮಾ ವಿಮರ್ಶೆಗೆ ಒಳಪಡುವ ಮಾಧ್ಯಮ. ಹಣ ಕೊಡುವ ವೀಕ್ಷಕರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಇದೆ. ಅದನ್ನು ಒಪ್ಪಿಕೊಳ್ಳುವ ಅಥವಾ ಒಪ್ಪಿಕೊಳ್ಳದೇ ಇರುವ ಸ್ವಾತಂತ್ರ್ಯ ಅವರಿಗಿದೆ’ ಎಂದು ಹೇಳಿರುವ ರಾಜ್‌ ಬಿ. ಶೆಟ್ಟಿ, ಅಭಿಪ್ರಾಯ ಹೇಳಿದ ಕಾರಣಕ್ಕೆ ಜನರಿಗೆ ಯಾವುದೇ ರೀತಿಯಲ್ಲಿ ನಾವು ಕಿರುಕುಳ ನೀಡಲು ಪ್ರಯತ್ನಿಸಬಾರದು ಎಂದು ಹೇಳಿದ್ದಾರೆ.

ವಿಡಿಯೊದಲ್ಲಿರುವವರು ನಮ್ಮ ಸಿನಿಮಾಗೆ ಸಂಬಂಧಪಟ್ಟವರಲ್ಲ. ಆದರೂ ನಾನು ಕಿರುಕುಳಕ್ಕೆ ಒಳಗಾದ ಯುವತಿಯ ಜತೆ ಕ್ಷಮೆ ಕೇಳುತ್ತೇನೆ. ನಮ್ಮನ್ನು ಕ್ಷಮಿಸಿ ಎಂದು ಬರೆದುಕೊಂಡಿದ್ದಾರೆ.

ಏನಿದು ಘಟನೆ?

ರಾಜ್. ಬಿ. ಶೆಟ್ಟಿ ನಟನೆಯ ‘ಟೋಬಿ’ ಚಿತ್ರ ಶುಕ್ರವಾರ ರಾಜ್ಯದಾದ್ಯಂತ ಬಿಡುಗಡೆಯಾಗಿದೆ.

ಚಿತ್ರ ಬಿಡುಗಡೆಯಾದ ಹಿನ್ನೆಲೆ ಯೂಟ್ಯೂಬ್‌ ಚಾನೆಲ್‌ವೊಂದು ಪೇಕ್ಷಕರ ಪ್ರತಿಕ್ರಿಯೆ ಕೇಳಿದ್ದು, ಮಹಿಳೆಯೊಬ್ಬರು ಚಿತ್ರ ಚೆನ್ನಾಗಿಲ್ಲ ಎಂದು ಹೇಳಿದ್ದಾರೆ.

ಮಹಿಳೆ ಚಿತ್ರಮಂದಿರದಿಂದ ಹೊರಬರುತ್ತಿದ್ದಂತೆ ಯುವಕನೊಬ್ಬನು ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ ಅಶ್ಲೀಲ ಶಬ್ದಗಳಿಂದ ಮಹಿಳೆಯನ್ನು ನಿಂದಿಸಿದ್ದಾನೆ. ‘ಚಿತ್ರ ಚೆನ್ನಾಗಿರಲಿಲ್ಲ ಅದಕ್ಕೆ ಚೆನ್ನಾಗಿಲ್ಲ ಎಂದೆ’ ಎಂದು ಮಹಿಳೆ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇಷ್ಟಕ್ಕೆ ಬಿಡದ ಯುವಕ, ’ಕನ್ನಡ ಚಿತ್ರ ಚೆನ್ನಾಗಿಲ್ಲ ಎಂದು ಹೇಳ್ತಿಯಾ?’ ಎಂದು ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಯುವಕ ವರ್ತನೆ ವಿರುದ್ಧ ನೆಟ್ಟಿಗರು ಕಿಡಿಕಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT