ಗುರುದತ್ ಗಾಣಿಗ ನಿರ್ದೇಶನದ ‘ಕರಾವಳಿ’ ಸಿನಿಮಾದಲ್ಲಿ ನಟ ರಾಜ್ ಬಿ.ಶೆಟ್ಟಿ ನಟಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೂ ಮೊದಲೇ ಗುರುದತ್ ಜೊತೆ ಇನ್ನೊಂದು ಸಿನಿಮಾ ಮಾಡಲು ರಾಜ್ ಮುಂದಾಗಿದ್ದಾರೆ.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪ್ರಸಿದ್ಧ ‘ಜುಗಾರಿ ಕ್ರಾಸ್’ ಕೃತಿಯನ್ನು ತೆರೆ ಮೇಲೆ ತರಲು ಗುರುದತ್ ಸಜ್ಜಾಗಿದ್ದು, ಈ ಮೂಲಕ ಕಾದಂಬರಿಯೊಂದಕ್ಕೆ ಸಿನಿಮಾ ರೂಪ ನೀಡುತ್ತಿದ್ದಾರೆ. ಈಗಾಗಲೇ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ನಾಯಕನಾಗಿ ರಾಜ್ ಬಿ.ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಭಿನ್ನವಾದ ಪಾತ್ರಗಳನ್ನೇ ಆಯ್ದುಕೊಂಡು ಬರುತ್ತಿರುವ ರಾಜ್, ‘ಕರಾವಳಿ’ ಸಿನಿಮಾದ ಪೋಸ್ಟರ್ನಲ್ಲಿ ಕೋಣಗಳ ಜೊತೆ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದರು.

ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದಿದೆ ಚಿತ್ರತಂಡ. ‘ಕರಾವಳಿ’ ಸಿನಿಮಾದ ಶೂಟಿಂಗ್ ಸಂಪೂರ್ಣವಾಗಿ ಮುಗಿಸಿರುವ ಗುರುದತ್ ಆ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳ ಜೊತೆಗೆ ‘ಜುಗಾರಿ ಕ್ರಾಸ್’ನಲ್ಲೂ ತೊಡಗಿಸಿಕೊಳ್ಳಲಿದ್ದಾರೆ. ‘ಕರಾವಳಿ’ ಸಿನಿಮಾದ ಸಿನಿಮಾಟೋಗ್ರಾಫರ್ ಅಭಿಮನ್ಯು ಸದಾನಂದನ್ ಈ ಸಿನಿಮಾಗೂ ಕೆಲಸ ಮಾಡಲಿದ್ದು, ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ತಾರಾಬಳಗದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು ಎಂದಿದೆ ಚಿತ್ರತಂಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.