ಶನಿವಾರ, ಸೆಪ್ಟೆಂಬರ್ 25, 2021
29 °C

ಅಶ್ಲೀಲ ಚಿತ್ರಗಳ ನಿರ್ಮಾಣ: ರಾಜ್‌ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಕೆಲವು ಆ್ಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಪ್ರಕರಣದಲ್ಲಿ ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾನನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪ್ರಕರಣದಲ್ಲಿ ರಾಜ್‌ ಕುಂದ್ರಾ ಸೇರಿದಂತೆ ಪೊಲೀಸ್‌ ವಶದಲ್ಲಿರುವ ಎಲ್ಲಾ 10 ಆರೋಪಿಗಳಿಗೂ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಜುಲೈ 19ರಂದು ಬಂಧಿಸಿದ್ದರು. ನಂತರ ಆರೋಪಿಗಳನ್ನು ಇಂದಿನವರೆಗೂ (ಜುಲೈ 27) ಪೊಲೀಸ್‌ ವಶಕ್ಕೆ ನೀಡಲಾಗಿತ್ತು. ಈ ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದು ನಮ್ಮ ಬಳಿ ಸಾಕಷ್ಟು ಪುರಾವೆಗಳಿವೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಬಿತ್ತರಿಸುತ್ತಿರುವ ಬಗ್ಗೆ 2021ರ ಫೆಬ್ರುವರಿಯಲ್ಲಿ ಮುಂಬೈನ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. 

ಇದುವರೆಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರನ್ನು ಬಂಧಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು