ಗುರುವಾರ , ಮೇ 26, 2022
31 °C

‘ರಾಜ ಮಾರ್ತಾಂಡ’ನಿಗೆ ದರ್ಶನ್‌ ಧ್ವನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಿವಂಗತ ಚಿರಂಜೀವಿ ಸರ್ಜಾ ಅಭಿನಯದ ‘ರಾಜ ಮಾರ್ತಾಂಡ’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಇಲ್ಲಿ ಚಿರು ಪಾತ್ರಕ್ಕೆ ಧ್ವನಿಯಾದವರು ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌. ಯುಗಾದಿಯಂದು ಪೋಸ್ಟರ್‌ ಬಿಡುಗಡೆಯಾಗಿದೆ. ಬಿಡುಗಡೆ ದಿನಾಂಕ ಇನ್ನಷ್ಟೇ ಗೊತ್ತಾಗಬೇಕಿದೆ. 

ಡಿ.ಸಿ.ಪಿ ಪ್ರಕಾಶ್ ಗೌಡ ಹಾಗೂ ಡಿ ಆರ್ ಸಿಯ ಎಂ.ಡಿ ಶ್ಯಾಮಲಾ ಅವರು ಈ ಸಂದರ್ಭದಲ್ಲಿ ‌ಇದ್ದರು.

ಚಿರಂಜೀವಿ ಸರ್ಜಾ ಅವರ ಸಾವಿನ ಮುಂಚೆಯೇ ಚಿತ್ರೀಕರಣ ಪೂರ್ಣಗೊಂಡಿತ್ತು. ‘ರಾಜಮಾರ್ತಾಂಡ’ ಶೀರ್ಷಿಕೆ ಹಾಗೂ ಚಿರು ಕಾರಣಕ್ಕೆ ಕುತೂಹಲ ಸೃಷ್ಟಿಸಿತ್ತು. 

ಕೆ.ರಾಮನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರವನ್ನು ಪ್ರಣವ್ ಗೌಡ ಎನ್., ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ.

ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು.ಡಿ.ವಿ. ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು