ಭಾನುವಾರ, ಫೆಬ್ರವರಿ 28, 2021
20 °C

ದಸರಾಗೆ ಬಿಡುಗಡೆಯಾಗಲಿದೆ ರಾಜಮೌಳಿಯ ಆರ್‌ಆರ್‌ಆರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿನಿಪ್ರಿಯರಲ್ಲಿ ನಿರೀಕ್ಷೆ ಹೆಚ್ಚಿಸಿರುವ ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್‌’(ರೌದ್ರಂ ರಣಂ ರುಧಿರಂ) ಚಿತ್ರದ ಬಿಡುಗಡೆಯ ದಿನಾಂಕ ಕೊನೆಗೂ ನಿಗದಿಯಾಗಿದೆ. ಬಹುಕೋಟಿ ವೆಚ್ಚ ಮತ್ತು ಅದ್ಧೂರಿ ತಾರಾಗಣದ ಈ ಚಿತ್ರ ಈ ವರ್ಷದ ದಸರಾ ಹಬ್ಬದಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ತೆಲುಗು, ಕನ್ನಡ, ತಮಿಳು ಸೇರಿದಂತೆ ಪಂಚ ಭಾಷೆಗಳಲ್ಲಿ ಈ ಚಿತ್ರವನ್ನು ಅಕ್ಟೋಬರ್‌ 13ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದೆ.

ಚಿತ್ರವು 2021ರಲ್ಲೇ ಜನವರಿ 8ರಂದು ಬಿಡುಗಡೆಯಾಗಲಿದೆ ಎನ್ನುವ ಸುದ್ದಿ ಈ ಮೊದಲು ಟಾಲಿವುಡ್‌ನಲ್ಲಿ ಹರಿದಾಡುತ್ತಿತ್ತು. ಕೊನೆಗೆ ಬಿಡುಗಡೆಯ ದಿನಾಂಕವನ್ನು ಜುಲೈ 30ಕ್ಕೆ ಮುಂದೂಡಲಾಗಿದೆ ಎನ್ನುವ ಸುದ್ದಿಯೂ ಇತ್ತು.

ಡಿ.ವಿ.ವಿ. ದಾನಯ್ಯ ಬಂಡವಾಳ ಹೂಡಿರುವ ಇದರ ಚಿತ್ರೀಕರಣ ಶೇಕಡ 80ರಷ್ಟು ಪೂರ್ಣಗೊಂಡಿದೆಯಂತೆ. ಈ ವರ್ಷದ ಜುಲೈನಲ್ಲಿಯೇ ಸಿನಿಮಾ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿತ್ತು. ಇದರ ಶೂಟಿಂಗ್‌ಗೂ ಕೊರೊನಾ ಭೀತಿ ತಟ್ಟಿದ್ದರಿಂದ ಚಿತ್ರೀಕರಣ ಸ್ಥಗಿತಗೊಂಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು