ಸೋಮವಾರ, ಮಾರ್ಚ್ 27, 2023
32 °C

ಕಾಂತಾರಕ್ಕೆ ರಜನಿಕಾಂತ್‌ ಮೆಚ್ಚುಗೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾಕ್ಕೆ ತಮಿಳಿನ ಸೂಪರ್‌ಸ್ಟಾರ್‌ ರಜನಿಕಾಂತ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಿನಿಮಾವನ್ನು ವೀಕ್ಷಿಸಿ ಟ್ವೀಟ್‌ ಮಾಡಿರುವ ರಜನಿಕಾಂತ್‌, ತಿಳಿದಿರುವುದಕ್ಕಿಂತ ತಿಳಿಯದಿರುವುದು ಬಹಳವಿರುತ್ತದೆ. ಹೊಂಬಾಳೆ ಫಿಲಂಸ್‌, ರಿಷಬ್‌ ಶೆಟ್ಟಿಗಿಂತ ಉತ್ತಮ ಸಿನಿಮಾ ನೀಡಿದ್ದಾರೆ. ರಿಷಬ್‌ ನಟನೆ, ನಿರ್ದೆಶನ, ಬರವಣಿಗೆಗೆ ಹ್ಯಾಟ್ಸಪ್‌. ಮೈನವಿರಳೇಸಿರುವ ಅನುಭವ ನೀಡಿದೆ. ತಂಡಕ್ಕೆ ಶುಭಾಶಯಗಳು ಎಂದಿದ್ದಾರೆ.

ಕನ್ನಡದಲ್ಲಿ 5ನೇ ವಾರವೂ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಕಾಂತಾರ, ತಮಿಳು, ತೆಲುಗು, ಹಿಂದಿ, ಮಲಯಾಳದಲ್ಲಿಯೂ ಅತ್ಯುತ್ತಮ ಗಳಿಕೆ ಕಾಣುತ್ತಿದೆ. ದೇಶದಾದ್ಯಂತ ಚಿತ್ರರಂಗದ ಅನೇಕ ಗಣ್ಯರು ಕಾಂತಾರವನ್ನು ಮೆಚ್ಚಿ ಶ್ಲಾಘಿಸಿದ್ದಾರೆ.

25 ದಿನಗಳಲ್ಲಿರಾಜ್ಯದಲ್ಲಿ 77 ಲಕ್ಷ ಟಿಕೆಟ್‌ ಮಾರಾಟವಾಗಿದೆ. ಈವರೆಗೆ ಹೊಂಬಾಳೆ ಫಿಲಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ‘ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ’ ಎಂಬ ಹೆಗ್ಗಳಿಕೆ ಕಾಂತಾರ ಪಾತ್ರವಾಗಿದೆ. ಈ ಮೂಲಕ ರಾಜ್ಯದಲ್ಲಿ ದೊಡ್ಡ ಹವಾ ಸೃಷ್ಟಿಸಿದ್ದ ಕೆಜಿಎಫ್‌, ಕೆಜಿಎಫ್‌–2, ರಾಜ್‌ಕುಮಾರ ಚಿತ್ರದ ದಾಖಲೆಗಳನ್ನು ಮುರಿದಿದೆ.

ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ರಿಷಬ್‌ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ.  ಹೊಂಬಾಳೆ ಫಿಲಂಸ್‌ ಚಿತ್ರವನ್ನು ನಿರ್ಮಿಸಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು