ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜತಂತ್ರ‘ ಜ. 1ರಂದು ಬಿಡುಗಡೆ

Last Updated 29 ಡಿಸೆಂಬರ್ 2020, 8:16 IST
ಅಕ್ಷರ ಗಾತ್ರ

ರಾಘವೇಂದ್ರ ರಾಜ್‌ಕುಮಾರ್‌ ಅಭಿನಯದ ಚಿತ್ರ ‘ರಾಜತಂತ್ರ’ ಜನವರಿ 1ರಂದು ಬಿಡುಗಡೆಯಾಗಲಿದೆ. ಹೊಸ ವರ್ಷದ ಮೊದಲ ದಿನ ಬಿಡುಗಡೆ ಆಗುತ್ತಿರುವ ಮೊದಲ ಚಿತ್ರ ಎಂಬುದು ಇದರ ಹೆಗ್ಗಳಿಕೆ.

ವಿಶ್ವಂ ಡಿಜಿಟಲ್ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಲಾಂಛನದಲ್ಲಿ ಜೆ.ಎಂ.ಪ್ರಹ್ಲಾದ್, ವಿಜಯ್ ಭಾಸ್ಕರ್ ಹರಪನಹಳ್ಳಿ ಹಾಗೂ ಪಿ.ಆರ್.ಶ್ರೀಧರ್ ಅವರು ಈ ಚಿತ್ರ ನಿರ್ಮಿಸಿದ್ದಾರೆ.

ಜೆ.ಎಂ.ಪ್ರಹ್ಲಾದ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಸಾಹಿತ್ಯ ಬರೆದಿದ್ದಾರೆ.ಪಿ.ವಿ.ಆರ್ ಸ್ವಾಮಿ ಗೂಗರದೊಡ್ಡಿ ಅವರ ನಿರ್ದೇಶನವಿದೆ. ಶ್ರೀಸುರೇಶ್ ಸಂಗೀತ ನಿರ್ದೇಶನವಿದೆ. ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ, ನಾಗೇಶ್ ಸಂಕಲನ, ಚಂದನ್ ಕಲಾ ನಿರ್ದೇಶನ ಹಾಗೂ ವೈಲೆಂಟ್ ವೇಲು, ರಾಮ್ ದೇವ್, ಅಲ್ಟಿಮೇಟ್‌ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ದೊಡ್ಡಣ್ಣ, ಶ್ರೀನಿವಾಸ ಮೂರ್ತಿ, ಭವ್ಯಾ, ರಂಜನ್ ಹಾಸನ್, ಶಂಕರ್ ಅಶ್ವಥ್, ನೀನಾಸಂ ಅಶ್ವಥ್, ಮುನಿರಾಜು, ವಿಜಯಭಾಸ್ಕರ್, ಪ್ರತಾಪ್‌ಸಿಂಹಸಿಂಹ ಅಗರ, ಶಿವಾನಂದ, ಪ್ರಕಾಶ್ ಕಾರಿಯಪ್ಪ, ವೆಂಕಟೇಶ್ ಪ್ರಸಾದ್, ಹೋಳಿ‌ ವೆಂಕಟೇಶ್, ಸ್ವಾತಿ ಅಂಬರೀಶ್, ವಲ್ಲಭ್, ಪ್ರವೀಣ್, ಉಮೇಶ್, ಕುಮಾರ್, ಕನ್ನಡ ಪ್ರೇಮ್, ಲಕ್ಷ್ಮಣ್, ಭೀಮ, ಆನಂದ್ ಪನ್ನೇದೊಡ್ಡಿ, ಹೇರಂಭ, ಸತೀಶ್ ಗೌಡ, ಮೀರಾಶ್ರೀ ಗೌಡ ಅವರು ತಾರಾಗಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT