ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪ್ಪುಗೆ ಕರ್ನಾಟಕ ರತ್ನ: ಸಮಾರಂಭಕ್ಕೆ ರಜನಿಕಾಂತ್, ಜೂ.ಎನ್‌ಟಿಆರ್ ಬರುವುದು ಖಚಿತ

Last Updated 30 ಅಕ್ಟೋಬರ್ 2022, 11:40 IST
ಅಕ್ಷರ ಗಾತ್ರ

ಬೆಂಗಳೂರು: ‘ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರವಾಗಿ ನ. 1ರಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ವಿಧಾನಸೌಧ ಮುಂಭಾಗದ ಮೆಟ್ಟಿಲ ಮೇಲೆ ಸಂಜೆ 4 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ರಜನಿಕಾಂತ್, ಜೂನಿಯರ್ ಎನ್‌ಟಿಆರ್ಬರುವುದು ಖಚಿತವಾಗಿದೆ.

ತಮ್ಮ ಅಧಿಕೃತ ಲೆಟರ್ ಹೆಡ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಾಗಿ ನಟ ರಜನಿಕಾಂತ್ ತಿಳಿಸಿದ್ದಾರೆ.ಇತ್ತ ಟಾಲಿವುಡ್ ನಟ ಜೂನಿಯರ್ ಎನ್‌ಟಿಆರ್ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿರುವುದಾಗಿ ಆಯೋಜಕರು ತಿಳಿಸಿದ್ದಾರೆ.

ಅಪ್ಪುಗೆ ನೀಡುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿಯು ಬೆಳ್ಳಿಯ ಸ್ಮರಣಿಕೆ, ಜೊತೆಗೆ, 50 ಗ್ರಾಂ ಚಿನ್ನದ ಪದಕ ಇರಲಿದೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ವಿ. ಸುನಿಲ್ ಕುಮಾರ್ ಸೇರಿದಂತೆ ಸಚಿವರು, ಶಾಸಕರು‌ ಭಾಗವಹಿಸಲಿದ್ದಾರೆ. ಗಾಯಕ ವಿಜಯಪ್ರಕಾಶ್ ತಂಡದಿಂದ ಸಂಗೀತ ರಸಮಂಜರಿ ಇರಲಿದೆ. 5 ಸಾವಿರ ಜನರಿಗೆ ಪಾಸ್ ನೀಡಲಾಗಿದೆ.

ಕಂಠೀರವ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಚರ್ಚೆಯಾಗಿತ್ತು.‌ ಆದರೆ, ಪುನೀತ್‌ ಸಹೋದರ ಮತ್ತು ಕುಟುಂಬದ ಆಶಯದಂತೆ ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಈ ಹಿಂದೆ ಕುವೆಂಪು, ಡಾ. ರಾಜ್‌ಕುಮಾರ್, ಎಸ್. ನಿಜಲಿಂಗಪ್ಪ, ಪ್ರೊ. ಸಿ.ಎನ್.ಆರ್. ರಾವ್,‌ ಪಂ. ಭೀಮಸೇನ ಜೋಶಿ, ಶಿವಕುಮಾರ ಸ್ವಾಮೀಜಿ, ದೇ. ಜವರೇಗೌಡ, ಡಿ. ವೀರೇಂದ್ರ ಹೆಗ್ಗಡೆ ಹೀಗೆ 8 ಸಾಧಕರಿಗೆ ವಿಧಾನ ಸೌಧದಲ್ಲಿಯೇ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT