ಶನಿವಾರ, ಸೆಪ್ಟೆಂಬರ್ 18, 2021
26 °C

ನಟ ರಜನಿಕಾಂತ್‌ ಆರೋಗ್ಯದಲ್ಲಿ ಚೇತರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಅನಾರೋಗ್ಯದ ಹಿನ್ನೆಲೆಯಲ್ಲಿ ನಟ ರಜನಿಕಾಂತ್‌ ಇಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬೆಳಗಿನ ಬುಲೇಟಿನ್‌ ಬಿಡುಗಡೆ ಮಾಡಿರುವ  ಅಪೋಲೋ ಆಸ್ಪತ್ರೆ ವೈದ್ಯಾಧಿಕಾರಿಗಳು ರಜನಿಕಾಂತ್‌ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ರಕ್ತದೊತ್ತಡದ ಸಮಸ್ಯೆ ಕಡಿಮೆಯಾಗುತ್ತಿದ್ದು ಒಂದೆರಡು ದಿನಗಳಲ್ಲಿ ಅವರು ಗುಣಮುಖರಾಗಲಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 

'ರಜನಿಕಾಂತ್ ಅವರು ಕಳೆದ 10 ದಿನಗಳಿಂದ  ‘ಅಣ್ಣಾತೆ’ ಸಿನಿಮಾ ಶೂಟಿಂಗ್‌ಗಾಗಿ ಹೈದರಾಬಾದ್‌ನಲ್ಲಿ ಉಳಿದುಕೊಂಡಿದ್ದರು. ಶೂಟಿಂಗ್‌ ಸೆಟ್‌ನಲ್ಲಿದ್ದ ಕೆಲವರಿಗೆ ಕೋವಿಡ್‌ ಇರುವುದು ಪತ್ತೆಯಾಗಿತ್ತು. ಡಿಸೆಂಬರ್ 22ರಂದು ರಜನಿಕಾಂತ್‌ ಅವರಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದೆ. ಆದರೆ, ಅವರಲ್ಲಿ ಕೋವಿಡ್‌ ಇರುವುದು ಪತ್ತೆಯಾಗಿರಲಿಲ್ಲ.

ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡಿದ್ದರಿಂದ ಶುಕ್ರವಾರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಬೇರೆ ಯಾವುದೇ ಖಾಯಿಲೆಯ ಲಕ್ಷಣಗಳಿಲ್ಲ. ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ' ಎಂದು ಆಸ್ಪತ್ರೆ ಮಾಹಿತಿ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು