ಚೆನ್ನೈನಲ್ಲಿ ಕನ್ನಡದಲ್ಲೇ ಕೆಜಿಎಫ್ ಸಿನಿಮಾ ವೀಕ್ಷಿಸಿದ ರಜನಿಕಾಂತ್: ಹೇಳಿದ್ದೇನು?

ಬೆಂಗಳೂರು: ಸೂಪರ್ಸ್ಟಾರ್ ರಜನಿಕಾಂತ್ ಅವರು ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್–2 ಚಿತ್ರವನ್ನು ವೀಕ್ಷಿಸಿದ್ದು, ಚಿತ್ರತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚೆನ್ನೈನಲ್ಲಿ 'ಕೆಜಿಎಫ್-2' ಕನ್ನಡ ಸಿನಿಮಾ ವೀಕ್ಷಿಸಿದ ರಜನಿಕಾಂತ್, ‘ಸಿನಿಮಾ ಅದ್ಭುತವಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ಅಭಿನಂದನೆಗಳು’ ಎಂದು ತಿಳಿಸಿದ್ದಾರೆ.
ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ವಿಶ್ವದಾದ್ಯಂತ ಏ.14ರಂದು ಬಿಡುಗಡೆಯಾಗಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ತುಂಬಿದ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುತ್ತಿದೆ.
ಓದಿ... ಕೆ.ಜಿ.ಎಫ್–2 ಸಿನಿಮಾ ವಿಮರ್ಶೆ: ಚಿನ್ನದ ಕಡಲಲ್ಲಿ ರಾಕಿ ‘ದುನಿಯಾ’
ಈ ಚಿತ್ರ ಬಿಡುಗಡೆಯಾದ ಎರಡೇ ದಿನದಲ್ಲಿ ₹300 ಕೋಟಿ ಗಳಿಸುವ ಮೂಲಕ ಗಲ್ಲಾ ಪೆಟ್ಟಿಗೆಯಲ್ಲಿ ಸಖತ್ ಸದ್ದು ಮಾಡುತ್ತಿದೆ.
ಸಿನಿಮಾ ವಿಶ್ಲೇಷಕರ ಪ್ರಕಾರ ಕೆಜಿಎಫ್ ಚಾಪ್ಟರ್ 2 ಸಿನಿಮಾ ಮೊದಲ ದಿನದಲ್ಲೇ ₹125 ಕೋಟಿ ಗಳಿಕೆ ಕಂಡಿತ್ತು ಎನ್ನಲಾಗಿದೆ. ಇನ್ನೊಂದು ವಿಶೇಷವೆಂದರೆ, ಹಿಂದಿಯಲ್ಲಿ ಬಿಡುಗಡೆಯಾಗಿ ಮೊದಲ ದಿನವೇ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾ ಎಂಬ ದಾಖಲೆಯನ್ನು ಈ ಚಿತ್ರ ಮಾಡಿದೆ.
ಹೊಂಬಾಳೆ ಫಿಲಂಸ್ ನಿರ್ಮಾಣದ ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ಯಶ್ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಶ್ರೀನಿಧಿ ಶೆಟ್ಟಿ ನಾಯಕಿಯಾಗಿ, ಸಂಜಯ್ ದತ್, ರವೀನಾ ಟಂಡನ್, ಪ್ರಕಾಶ್ ರಾಜ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಓದಿ... ಕೆಜಿಎಫ್ ಚಾಪ್ಟರ್-2: ಕೇವಲ 2 ದಿನದ ಕಲೆಕ್ಷನ್ ಕೇಳಿ ದಂಗಾದ ಚಿತ್ರರಂಗ!
To the world we present the much awaited magnum opus #KGFChapter2#KGF2InCinemas near you.@Thenameisyash @prashanth_neel @VKiragandur @hombalefilms @duttsanjay @TandonRaveena@SrinidhiShetty7 @excelmovies @AAFilmsIndia @VaaraahiCC @DreamWarriorpic @PrithvirajProd pic.twitter.com/uQptYdnPSZ
— Hombale Films (@hombalefilms) April 14, 2022
ಓದಿ... IPL | ಭಾರತ ತಂಡಕ್ಕೆ ಸೇರ್ಪಡೆಯಾಗಲು ಎಲ್ಲ ಪ್ರಯತ್ನ ಮಾಡುತ್ತಿದ್ದೇನೆ: ಕಾರ್ತಿಕ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.