ಪ್ರಜ್ವಲ್ ದೇವರಾಜ್ ನಟನೆಯ ‘ರಾಕ್ಷಸ’ ಸಿನಿಮಾ ಶಿವರಾತ್ರಿಯಂದು (ಫೆ.26) ಬಿಡುಗಡೆಯಾಗುತ್ತಿದ್ದು, ಚಿತ್ರದಲ್ಲಿ ನಾಯಕಿಯಾಗಿ ಸೋನಲ್ ಮೊಂತೆರೋ ಅಭಿನಯಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನವಿದೆ.

ಯೋಗರಾಜ್ ಭಟ್ ನಿರ್ದೇಶನದ ‘ಪಂಚತಂತ್ರ’ ಸಿನಿಮಾ ಮೂಲಕ ಗಾಂಧಿನಗರದಲ್ಲಿ ಗುರುತಿಸಿಕೊಂಡ ನಟಿ ಸೋನಲ್ ಮೊಂತೆರೋ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ‘ಮಮ್ಮಿ’, ‘ದೇವಕಿ’ ಸಿನಿಮಾ ಖ್ಯಾತಿಯ ಲೋಹಿತ್ ‘ರಾಕ್ಷಸ’ ಸಿನಿಮಾ ನಿರ್ದೇಶಿಸಿದ್ದಾರೆ. ಇವರ ಸಿನಿಮಾಗಳಲ್ಲಿ ನಾಯಕಿಯ ಪಾತ್ರಕ್ಕೆ ಹೆಚ್ಚಿನ ಪ್ರಾಧಾನ್ಯತೆ ಇದ್ದು, ಸೋನಲ್ ಪಾತ್ರವೂ ಗಮನಸೆಳೆಯುವಂತಿದೆ ಎಂದಿದೆ ಚಿತ್ರತಂಡ. ಈವರೆಗೆ 36ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಪ್ರಜ್ವಲ್, ಇವೆಲ್ಲಕ್ಕಿಂತಲೂ ವಿಭಿನ್ನವಾಗಿ ‘ರಾಕ್ಷಸ’ ಚಿತ್ರದ ಮೂಲಕ ಪ್ರೇಕ್ಷಕರೆದುರಿಗೆ ಬರಲಿದ್ದಾರೆ. ಚಿತ್ರದಲ್ಲಿ ಶೋಭಾರಾಜ್, ವತ್ಸಲಾ ಮೋಹನ್, ಸಿದ್ಲಿಂಗು ಶ್ರೀಧರ್, ಆರ್ನ ರಾಥೋಡ್ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ.

‘ರಾಕ್ಷಸ’ ಸಿನಿಮಾದ ಶೇ 80ರಷ್ಟು ಚಿತ್ರೀಕರಣ ರಾಮೋಜಿ ಫಿಲಂ ಸಿಟಿಯಲ್ಲಿ ನಡೆದಿದೆ. ಶಾನ್ವಿ ಎಂಟರ್ಟೈನ್ಮೆಂಟ್ನಡಿ ದೀಪು ಬಿ.ಎಸ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ಜೇಬಿನ್ ಪಿ ಜೋಕಬ್ ಛಾಯಾಚಿತ್ರಗ್ರಹಣ, ವಿನೋದ್ ಸಾಹಸ ನಿರ್ದೇಶನ, ವರುಣ್ ಉನ್ನಿ ಸಂಗೀತ ನಿರ್ದೇಶನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.