ಉಡುಪಿ: ನಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ದಿಢೀರ್ ಎಂಬಂತೆ ಪ್ರತ್ಯಕ್ಷ ಆಗಿದ್ದಾರೆ. ತಮ್ಮೂರಿನಲ್ಲಿ ನಡೆದ ನೇಮೋತ್ಸವದಲ್ಲಿ ನಟ ರಕ್ಷಿತ್ ಶೆಟ್ಟಿ ಭಾಗಿಯಾದ್ದಾರೆ.
.ಅತ್ಯುತ್ತಮ ನಟ ಪ್ರಶಸ್ತಿ: ಈ ಮೂವರಿಗೆ ಧನ್ಯವಾದ ತಿಳಿಸಿದ ರಕ್ಷಿತ್ ಶೆಟ್ಟಿ.ಸಂಗೀತ ಶೃಂಗೇರಿ ಹೊಸ ಆಲ್ಬಂ ಸಾಂಗ್ ಬಿಡುಗಡೆ: ಬೋಲ್ಡ್ ಲುಕ್ನಲ್ಲಿ ಚಾರ್ಲಿ ನಟಿ.
ಉಡುಪಿಯ ಅಲೆವೂರಿನ ಕಲ್ಯಾಣ ನಗರದಲ್ಲಿ ನಡೆದ ವೈದ್ಯನಾಥ ಬಬ್ಬುಸ್ವಾಮಿ ದೈವದ ನೇಮೋತ್ಸವದಲ್ಲಿ ಕುಟುಂಬ ಸದಸ್ಯರ ಜೊತೆ ಅವರು ಪಾಲ್ಗೊಂಡಿದ್ದರು. ಅಲೆವೂರಿನ ದೊಡ್ಡಮನೆ ಮನೆತನದವರಾದ ರಕ್ಷಿತ್ ಶೆಟ್ಟಿ ಅವರು ಪ್ರತಿ ವರ್ಷವೂ ನೇಮೋತ್ಸವದಲ್ಲಿ ಭಾಗಿಯಾಗುತ್ತಾರೆ. ಈ ಬಾರಿಯೂ ಕುಟುಂಬದವರ ಜತೆ ನೇಮೋತ್ಸವಕ್ಕೆ ಹಾಜರಾಗಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಳಿಕ ರಕ್ಷಿತ್ ಶೆಟ್ಟಿ ಅವರು ಬೇರೆ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅಭಿಮಾನಿಗಳಲ್ಲಿ ಗೊಂದಲ ಮನೆಮಾಡಿತ್ತು. ಅಲ್ಲದೆ ರಕ್ಷಿತ್, ಹೊಸ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಕಾಣಿಸಿಕೊಳ್ಳುತ್ತಾರೆ ಎಂಬ ಮಾತುಗಳು ಸಾಮಾಜಿಕ ಮಾಧ್ಯಮದಲ್ಲಿ ಕೇಳಿ ಬರುತಿತ್ತು. ಈ ಮಧ್ಯೆ ರಕ್ಷಿತ್ ಶೆಟ್ಟಿ ಮತ್ತೆ ಕಾಣಿಸಿಕೊಂಡಿದ್ದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.