ಭಾನುವಾರ, ಮಾರ್ಚ್ 29, 2020
19 °C

ಜಾಮೀನು ರಹಿತ ವಾರಂಟ್: ರಕ್ಷಿತ್ ಶೆಟ್ಟಿ ಹೇಳಿದ್ದೇನು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಪಿರೈಟ್‌ ಉಲ್ಲಂಘಿಸಿ ‘ಕಿರಿಕ್‌ ಪಾರ್ಟಿ’ ಚಿತ್ರದಲ್ಲಿ ಹಾಡು ಬಳಸಿದ ಆರೋಪ ಸಂಬಂಧ ನಟ ರಕ್ಷಿತ್ ಶೆಟ್ಟಿ ವಿರುದ್ಧ  ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿರುವುದಕ್ಕೆ ಟ್ವೀಟ್‌ ಮೂಲಕ ರಕ್ಷಿತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.  

ಈ ಬಗ್ಗೆ ಟ್ವೀಟ್‌ ಮಾಡಿರುವ ರಕ್ಷಿತ್ ಶೆಟ್ಟಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಈಗಾಗಲೇ ಸಿವಿಲ್ ಮತ್ತು ಹೈ ಕೋರ್ಟ್‌ನಲ್ಲಿ ಈ ಕೇಸ್ ಅನ್ನು ಗೆದ್ದಿದೇವೆ. ಮತ್ತೆ ಅದೇ ಪ್ರಕರಣದ ಮೇಲೆ ಇನ್ನೊಂದು ಕೇಸ್‌ ದಾಖಲಿಸುವುದರಿಂದ ಯಾವ ಪ್ರಯೋಜನವಿದೆ? 6 ತಿಂಗಳ ಹಿಂದೆ ಎರಡನೇ ಪ್ರಕರಣ ದಾಖಲಿಸಿದ್ದ ನಮಗೂ ನಮ್ಮ ವಕೀಲರಿಗೂ ಮಾಹಿತಿ ನೀಡಿಲ್ಲ ಯಾಕೆ ಎಂದು ರಕ್ಷಿತ್‌ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.

ಮುಂದುವರೆದು ಮತ್ತೊಂದು ಟ್ವೀಟ್‌ ಮಾಡಿರುವ ರಕ್ಷಿತ್ ಶೆಟ್ಟಿ, ನಾವು ಮತ್ತೆ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇವೆ. ಆಗ ನಮ್ಮ ಸಿನಿಮಾ ಬಿಡುಗಡೆಗೆ ಕಷ್ಟವಾಗಿತ್ತು. ಕೊನೆಯ ಕ್ಷಣದಲ್ಲಿ ಹಾಡನ್ನು ಕತ್ತರಿಸಿ ಚಿತ್ರವನ್ನು ಬಿಡುಗಡೆ ಮಾಡಲಾಯಿತು ಎಂದು ರಕ್ಷಿತ್ ಶೆಟ್ಟಿ ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ. 

ಲಹರಿ ಸಂಸ್ಥೆಯು ಎರಡನೇ ಪ್ರಕರಣ ದಾಖಲಿಸಿರುವ ಸಂಬಂಧ ರಕ್ಷಿತ್‌ ಶೆಟ್ಟಿ ಮತ್ತು ತಂಡ ನ್ಯಾಯಾಲಯಕ್ಕೆ ಹಾಜರಾಗದೇ ಇರುವುದಕ್ಕೆ ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ: 2016ರ ಡಿಸೆಂಬರ್ 30ರಂದು ಬಿಡುಗಡೆ ಆದ ಕಿರಿಕ್ ಪಾರ್ಟಿ ಚಿತ್ರದಲ್ಲಿ ಹೇಯ್‌ ಹೂ ಆರ್‌ ಯೂ (Hey who are you) ಹಾಡನ್ನು ಲಹರಿ ಸಂಸ್ಥೆಯ ಅನುಮತಿ ಇಲ್ಲದೆ ಬಳಸಲಾಗಿತ್ತು. ‘ಶಾಂತಿ ಕ್ರಾಂತಿ’ ಚಿತ್ರದ ಹಾಡನ್ನು ಚಿತ್ರದಲ್ಲಿ ಬಳಸಿಕೊಂಡಿದ್ದರಿಂದ ಲಹರಿ ಸಂಸ್ಥೆ 2017ರ ಜನವರಿ 11ರಂದು ದೂರು ದಾಖಲಿಸಿತ್ತು.

ಲಹರಿ ಆಡಿಯೋ ಸಂಸ್ಥೆ ಕಾಪಿ ರೈಟ್ ಕಾಯ್ದೆ ಅಡಿ ರಕ್ಷಿತ್ ಶೆಟ್ಟಿ , ಪರಮವ್ಹಾ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ವಿರುದ್ಧ ಪ್ರಕರಣ ದಾಖಲಿಸಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು