ಶನಿವಾರ, ಜೂನ್ 12, 2021
23 °C

ಒಂದೂವರೆ ಕೋಟಿಗೂ ಮಿಕ್ಕಿ ವೀಕ್ಷಣೆ ಪಡೆದ ‘ಚಾರ್ಲಿ 777’ ಟೀಸರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಕ್ಷಿತ್‌ ಶೆಟ್ಟಿ ನಟನೆಯ ‘ಚಾರ್ಲಿ–777’ ಟೀಸರ್‌ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲಿ ಸುಮಾರು ಒಂದೂವರೆ ಕೋಟಿ ಜನ ವೀಕ್ಷಿಸಿದ್ದಾರೆ. ಕನ್ನಡ, ಮಲಯಾಳಂ, ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾದ ಟೀಸರ್‌ನ್ನು ಪ್ರತಿ ಆವೃತ್ತಿಯಲ್ಲೂ ಲಕ್ಷಾಂತರ ಜನ ವೀಕ್ಷಿಸಿದ್ದಾರೆ.

ಸದ್ಯದ ಅಂಕಿ ಅಂಶಗಳ ಪ್ರಕಾರ ಕನ್ನಡದಲ್ಲಿ 41 ಲಕ್ಷ, ಮಲಯಾಳಂ ಮತ್ತು ತೆಲುಗಿನಲ್ಲಿ ತಲಾ 25 ಲಕ್ಷ, ತಮಿಳಿನಲ್ಲಿ 28 ಲಕ್ಷ, ಹಿಂದಿ ಭಾಷೆಯಲ್ಲಿ 23 ಲಕ್ಷ ಜನ ವೀಕ್ಷಿಸಿದ್ದಾರೆ. ಈ ವೀಕ್ಷಕರ ಪ್ರಮಾಣ ಏರುತ್ತಲೇ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯೂ ವ್ಯಕ್ತವಾಗಿದೆ. ಪ್ರಮುಖ ಸ್ಟಾರ್‌ ನಟರೂ ಕೂಡಾ ರಕ್ಷಿತ್‌ ಶೆಟ್ಟಿ ಅವರನ್ನು ಅಭಿನಂದಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು