ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚ ಭಾಷೆಗಳಲ್ಲಿ ತೆರೆ ಮೇಲೆ ‘777 ಚಾರ್ಲಿ’

Last Updated 29 ಮೇ 2021, 10:38 IST
ಅಕ್ಷರ ಗಾತ್ರ

ನಟ ರಕ್ಷಿತ್‌ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ತೆರೆ ಮೇಲೆ ಬರಲಿದ್ದು, ಚಿತ್ರದ ಅಧಿಕೃತ ಟೀಸರ್‌ ‘ಲೈಫ್‌ ಆಫ್‌ ಚಾರ್ಲಿ’ ಜೂನ್‌ 6ರಂದು ಬಿಡುಗಡೆಯಾಗಲಿದೆ.

ಈ ಚಿತ್ರವನ್ನು ಕಿರಣ್‌ ರಾಜ್‌ ಕೆ. ನಿರ್ದೇಶಿಸಿದ್ದು, ಜಿ.ಎಸ್‌.ಗುಪ್ತ ಹಾಗೂ ರಕ್ಷಿತ್‌ ಶೆಟ್ಟಿ ಇದರ ನಿರ್ಮಾಪಕರಾಗಿದ್ದಾರೆ.ಸಂಗೀತಾ ಶೃಂಗೇರಿ ಚಿತ್ರದ ನಾಯಕಿ. ಚಿತ್ರದಲ್ಲಿ ನಟ, ನಿರ್ದೇಶಕ ರಾಜ್‌ ಬಿ.ಶೆಟ್ಟಿ, ಡ್ಯಾನಿಶ್‌ ಸೇಟ್‌ ತಾರಾಗಣದಲ್ಲಿದ್ದಾರೆ.

‘ಸೆಪ್ಟೆಂಬರ್‌ ಮೊದಲ ವಾರದಲ್ಲಿ ಚಿತ್ರವನ್ನು ಬಿಡುಗಡೆಗೊಳಿಸಲಾಗುವುದು’ ಎಂದು ನಟ ರಕ್ಷಿತ್‌ ಶೆಟ್ಟಿ ಈ ಹಿಂದೆ ತಿಳಿಸಿದ್ದರು. ಆದರೆ ಲಾಕ್‌ಡೌನ್‌ ಕಾರಣದಿಂದಾಗಿ ಏಪ್ರಿಲ್‌, ಮೇ ತಿಂಗಳಲ್ಲಿ ತೆರೆಕಾಣಬೇಕಿದ್ದ ಕೋಟಿಗೊಬ್ಬ–3, ಸಲಗ, ಭಜರಂಗಿ–2 ಹೀಗೆ ಕೆಲ ಸಿನಿಮಾಗಳ ಬಿಡುಗಡೆ ಮುಂದಕ್ಕೆ ಹೋಗಿವೆ. ಹೀಗಾಗಿ ‘777 ಚಾರ್ಲಿ’ ಸಿನಿಮಾದ ಬಿಡುಗಡೆಯೂ ಮುಂದಕ್ಕೆ ಹೋಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT