ಎಸ್.ವಿ.ರಾಜೇಂದ್ರಸಿಂಗ್ ಬಾಬು ನಿರ್ದೇಶನದ ‘ರಕ್ತ ಕಾಶ್ಮೀರ’ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ. ಉಪೇಂದ್ರ ಹಾಗೂ ರಮ್ಯಾ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

‘ಸಾಮಾಜಿಕ ಸಂದೇಶವುಳ್ಳ ಚಿತ್ರ. ಭಯೋತ್ಪಾದನೆಯ ವಿರುದ್ದ ಸಮರ ಸಾರುವ ಚಿತ್ರವೂ ಹೌದು. ಉಪೇಂದ್ರ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕ ಮಕ್ಕಳಿಗೆ ಭಯೋತ್ಪಾದನೆಯ ವಿರುದ್ಧ ಹೋರಾಡುವುದು ಹೇಗೆ ಎಂಬುದನ್ನು ತರಬೇತಿ ನೀಡಿರುತ್ತಾನೆ. ಮಕ್ಕಳು ಹೇಗೆ ಭಯೋತ್ಪಾದಕರಿಂದ ಪಾರಾಗುತ್ತಾರೆ ಹಾಗೂ ನಗರದಲ್ಲಿ ನಡೆಯಬಹುದಾದ ಭಾರಿ ಸ್ಫೋಟವನ್ನು ಹೇಗೆ ತಪಿಸುತ್ತಾರೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ’ ಎಂದರು ರಾಜೇಂದ್ರಸಿಂಗ್ ಬಾಬು.

‘ನಾಗರಹೊಳೆ’ ಚಿತ್ರದ ನಂತರ ಮಕ್ಕಳನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಚಿತ್ರವಿದು. ಇದರಲ್ಲಿ ನೂರಕ್ಕೂ ಅಧಿಕ ಮಕ್ಕಳು ಅಭಿನಯಿಸಿದ್ದಾರೆ. ಪ್ರಮುಖಪಾತ್ರದಲ್ಲಿ ಏಳು ಮಕ್ಕಳು ನಟಿಸಿದ್ದಾರೆ. ಚಿತ್ರದ ಹಾಡೊಂದರಲ್ಲಿ ವಿಷ್ಣುವರ್ಧನ್, ಅಂಬರೀಶ್, ಶ್ರೀನಾಥ್, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ಜಗ್ಗೇಶ್, ಉಪೇಂದ್ರ, ರಮೇಶ್ ಅರವಿಂದ್, ದರ್ಶನ್, ಜೈಜಗದೀಶ್, ಆದಿತ್ಯ, ರಾಕ್ಲೈನ್ ವೆಂಕಟೇಶ್ ಸೇರಿದಂತೆ ಕನ್ನಡದ ದಿಗ್ಗಜ ನಾಯಕರು ಬರುತ್ತಾರೆ. ಈ ಹಾಡನ್ನು ಹಲವು ವರ್ಷಗಳ ಹಿಂದೆ ಚಿತ್ರೀಕರಿಸಲಾಗಿತ್ತು. ಚಿತ್ರವನ್ನು ಸದ್ಯದಲ್ಲೇ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ನನ್ನ ನಿರ್ದೇಶನ ಮತ್ತೊಂದು ಚಿತ್ರ ‘ವೀರ ಕಂಬಳ’ ಕೂಡ ಜನವರಿಯಲ್ಲಿ ಬಿಡುಗಡೆಯಾಗಲಿದೆ’ ಎಂದರು ಬಾಬು.