ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಯ್‌ಫ್ರೆಂಡ್‌ ಜಕ್ಕಿ ಬಗ್‌ನಾನಿಗೆ ಶುಭಾಶಯ ಕೋರಿದ ನಟಿ ರಾಕುಲ್ ಪ್ರೀತ್ ಸಿಂಗ್ 

Last Updated 25 ಡಿಸೆಂಬರ್ 2021, 9:05 IST
ಅಕ್ಷರ ಗಾತ್ರ

ಮುಂಬೈ: ನಟ ಹಾಗೂ ಚಿತ್ರನಿರ್ಮಾಪಕಜಕ್ಕಿ ಬಗ್‌ನಾನಿ ಅವರು ಶನಿವಾರ 37ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

ಈ ವಿಶೇಷ ದಿನದಂದು, ಬಗ್‌ನಾನಿ ಅವರ ಗರ್ಲ್‌ಫ್ರೆಂಡ್‌ಹಾಗೂನಟಿ ರಾಕುಲ್ ಪ್ರೀತ್ ಸಿಂಗ್ ಫೋಟೊ ಹಂಚಿಕೊಳ್ಳುವ ಮೂಲಕ ಶುಭಾಶಯ ಕೋರಿದ್ದಾರೆ.

‘ಹ್ಯಾಪಿ, ಹ್ಯಾಪಿ ಬರ್ತ್‌ ಡೇಮೈ ಸನ್‌ಶೈನ್. ನೀನುಯಾವಾಗಲೂ ನಗುತ್ತಿರುಮತ್ತು ಈ ನಗುವನ್ನು ಎಲ್ಲರಿಗೂ ಹಂಚುತ್ತಿರು.ನಾನು ನಿನಗೆ ಜನ್ಮದಿನದ ಶುಭಾಶಯಕೋರುತ್ತೇನೆ’ಎಂದು ರಾಕುಲ್‌ ಪೋಸ್ಟ್‌ ಮಾಡಿದ್ದಾರೆ.

ಕೋಲ್ಕತ್ತ ಮೂಲದ 36 ವರ್ಷದ ಜಕ್ಕಿ ಬಗ್‌ನಾನಿ ಬಾಲಿವುಡ್‌ ನಟ ಹಾಗೂ ನಿರ್ಮಾಪಕ. 2001 ರಲ್ಲಿ ‘ರೆಹನಾ ಹೈ ತೆರೆ ದಿಲ್ ಮೇನ್’ ಸಿನಿಮಾ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದರು.

‘ಫಾಲ್ತು’, ‘ಅಜಬ್ ಗಜಬ್’, ‘ಮೋಹಿನಿ’, ‘ವೆಲ್‌ ಕಮ್ ಟು ಕರಾಚಿ’, ‘ರಂಗ್ರೇಜ್’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದು, ‘ಕೂಲಿ ನಂ 1’, ‘ವೆಲ್‌ ಕಮ್ ಟು ನ್ಯೂಯಾರ್ಕ್’, ‘ಬೆಲ್ ಬಾಟಮ್’ ಸೇರಿ ಹಲವುಸಿನಿಮಾಗಳನ್ನು ನಿರ್ಮಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT