ಮಂಗಳವಾರ, ಜನವರಿ 18, 2022
15 °C

ಮದುವೆ ಕುರಿತು ನಟಿ ರಾಕುಲ್‌ ಪ್ರೀತ್‌ ಸಿಂಗ್‌ ಹೇಳಿದ್ದೇನು?

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನಟ ಹಾಗೂ ಚಿತ್ರ ನಿರ್ಮಾಪಕ ಜಕ್ಕಿ ಬಗ್‌ನಾನಿಯೊಂದಿಗೆ ನಟಿ ರಾಕುಲ್ ಪ್ರೀತ್ ಸಿಂಗ್ ಡೇಟಿಂಗ್‌ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅವರಿಬ್ಬರ ಮದುವೆ ಕುರಿತ ಗಾಸಿಪ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಲೇ ಇವೆ. 

ಈ ಬಗ್ಗೆ ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿರುವ ರಾಕುಲ್‌, ‘ಒಂದು ವೇಳೆ ನಾನು ಮದುವೆಯಾದರೆ, ಇತರ ವಿಷಯಗಳಂತೆ ಆ ವಿಷಯವನ್ನೂ ಸಹ ನಿಮ್ಮ ಮುಂದೆ ಹಂಚಿಕೊಳ್ಳುತ್ತೇನೆ. ಇದೀಗ, ನಾನು ನನ್ನ ವೃತ್ತಿಜೀವನದ ಮೇಲೆ ಹೆಚ್ಚು ಗಮನಹರಿಸಿದ್ದೇನೆ’ ಎಂದು ತಿಳಿಸಿದ್ದಾರೆ.

‘ಸೆಲೆಬ್ರಿಟಿಗಳ ಜೀವನವು ಯಾವಾಗಲೂ ಪರೀಕ್ಷೆಗೆ ಒಳಪಡುತ್ತಲೇ ಇರುತ್ತದೆ. ಸುತ್ತಲಿನ ಗದ್ದಲದಿಂದ ನಾನು ಗೊಂದಲಕ್ಕೆ ಒಳಗಾಗಲು ಬಯಸುವುದಿಲ್ಲ. ಕ್ಯಾಮರಾದ ಮುಂದೆ ಕೆಲಸ ಮಾಡುತ್ತೇನೆ. ಆದರೆ, ನಾನೂ ಸಹ ವೈಯಕ್ತಿಕ ಬದುಕನ್ನು ಹೊಂದಿದ್ದೇನೆ’ ಎಂದು ರಾಕುಲ್‌ ಹೇಳಿದ್ದಾರೆ. 

ಕೋಲ್ಕತ್ತ ಮೂಲದ 36 ವರ್ಷದ ಜಕ್ಕಿ ಬಗ್‌ನಾನಿ ಬಾಲಿವುಡ್‌ ನಟ ಹಾಗೂ ನಿರ್ಮಾಪಕ. 2001 ರಲ್ಲಿ ‘ರೆಹನಾ ಹೈ ತೆರೆ ದಿಲ್ ಮೇನ್’ ಸಿನಿಮಾ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದರು. 

‘ಫಾಲ್ತು’, ‘ಅಜಬ್ ಗಜಬ್’, ‘ಮೋಹಿನಿ’, ‘ವೆಲ್‌ ಕಮ್ ಟು ಕರಾಚಿ’, ‘ರಂಗ್ರೇಜ್’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದು, ‘ಕೂಲಿ ನಂ 1’, ‘ವೆಲ್‌ ಕಮ್ ಟು ನ್ಯೂಯಾರ್ಕ್’, ‘ಬೆಲ್ ಬಾಟಮ್’ ಸೇರಿ ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು